VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Jan 13, 2010

ಅಫ್ಘಾನ್-ಕುರಾನ್‌ಗೆ ಬೆಂಕಿ:ಗುಂಡಿನ ದಾಳಿಗೆ 9 ಬಲಿ

ವಿದೇಶಿ ಮಿಲಿಟರಿ ಪಡೆಗಳು ಇಸ್ಲಾಂ ಧರ್ಮದ ಪವಿತ್ರ ಗ್ರಂಥವಾದ ಕುರಾನ್ ಅನ್ನು ಬೆಂಕಿ ಹಚ್ಚಿ ಸುಟ್ಟಿರುವುದನ್ನು ತೀವ್ರವಾಗಿ ಖಂಡಿಸಿ ಅಫ್ಘಾನ್ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹಿಂಸಾಚಾರ ಸ್ಫೋಟಿಸಿದ್ದು, ಪರಿಣಾಮ ಪೊಲೀಸರ ಶೂಟಿಂಗ್‌ಗೆ 9ಮಂದಿ ಬಲಿಯಾಗಿರುವುದಾಗಿ ಬುಧವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯಾಟೋ ನೇತೃತ್ವದ ಮಿಲಿಟರಿ ಪಡೆ ಗ್ರಾಮ್‌ಸರ್ ಜಿಲ್ಲೆಯ ದಕ್ಷಿಣ ಪ್ರಾಂತ್ಯದ ಹೆಲ್ಮಾಂಡ್‌ನಲ್ಲಿ ಮುಸ್ಲಿಮರ ಪವಿತ್ರ ಗ್ರಂಥ ಕುರಾನ್‌ನ ಪ್ರತಿಗಳಿಗೆ ಬೆಂಕಿ ಹಚ್ಚಿದ್ದಾರೆಂಬ ವದಂತಿ ಹಬ್ಬಿದ ನಂತರ ಮಂಗಳವಾರ ಹಿಂಸಾಚಾರ ಸ್ಫೋಟಗೊಂಡಿತ್ತು ಎಂದು ಸ್ಥಳೀಯರು ಮತ್ತು ಪೊಲೀಸರು ವಿವರಿಸಿದ್ದಾರೆ.

ಪ್ರತಿಭಟನಾಕಾರರು ಏಕಾಏಕಿ ರಾಷ್ಟ್ರೀಯ ಭದ್ರತಾ ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ನಡೆಸಿದ ಗುಂಡಿನ ದಾಳಿಗೆ ಎಂಟು ಮಂದಿ ಪ್ರತಿಭಟನಾಕಾರರು ಸಾವನ್ನಪ್ಪಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಖಾಮಲ್ ದಿನ್‌ಖಾನ್ ಹೇಳಿದ್ದಾರೆ. ಏತನ್ಮಧ್ಯೆ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸುತ್ತಿರುವಾಗ ಅಫ್ಘಾನ್ ನ್ಯಾಷನಲ್ ಗಾರ್ಡ್ ಒಬ್ಬ ಬಲಿಯಾಗಿರುವುದಾಗಿಯೂ ತಿಳಿಸಿದರು.

ಹತ್ತು ಹೆಚ್ಚು ಮಂದಿ ಪ್ರತಿಭಟನಾಕಾರರ ಹೊಟ್ಟೆ, ತಲೆ ಹಾಗೂ ಕಾಲುಗಳಿಗೆ ಪೆಟ್ಟು ಬಿದ್ದಿದ್ದು, ಅವರನ್ನೆಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ತುಂಬಾ ಗಂಭೀರವಾಗಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ.

webdunia

No comments: