
ರೈತರ ಮೇಲೆ ಸರ್ಕಾರದಿಂದ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಜನತಾ ಹೋರಾಟದ ಮೂಲಕ ಸರ್ಕಾರಕ್ಕೆ ತಕ್ಕ ಉತ್ತರ ನೀಡುತ್ತೇನೆ. ಇದು ಮಾಡು ಇಲ್ಲವೇ ಮಡಿ ಹೋರಾಟ ಎಂದು ಗುಡುಗಿದ್ದಾರೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವುದು ಅನಾಗರಿಕ ಸರ್ಕಾರ ಎಂದು ವಾಗ್ದಾಳಿ ನಡೆಸಿರುವ ಗೌಡರು ರೈತರಿಗೆ ಕೈಕೋಳ ತೊಡಿಸಿರುವುದನ್ನು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಯಕ್ಕಾಗಿ ನೈಸ್ ರಸ್ತೆಯಲ್ಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಆ ನಿಟ್ಟಿನಲ್ಲಿ ತಾನು ಇಂದು ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸುವುದಾಗಿ ಹೇಳಿದರು. ಅಲ್ಲದೇ, ರೈತರ ಹೋರಾಟಕ್ಕೆ ತಾನು ಕೂಡ ಸಾಥ್ ನೀಡಿ ಸರ್ಕಾರಕ್ಕೆ ತಕ್ಕೆ ಉತ್ತರ ನೀಡುತ್ತೇನೆ ಎಂದರು. ರೈತರೊಂದಿಗಿನ ಹೋರಾಟದಲ್ಲಿ ಜೈಲಿಗೆ ಹೋಗಲೂ ಕೂಡ ಸಿದ್ದ ಎಂದು ಹೇಳಿದರು.
ಇದು ಸರ್ಕಾರದ ವಿರುದ್ಧ ತಾನು ಸಾರುವ ಮಾಡು ಇಲ್ಲವೇ ಮಡಿ ಹೋರಾಟ ಎಂದು ಎಚ್ಚರಿಕೆ ನೀಡಿರುವ ಗೌಡರು, ರೈತರ ವಿರುದ್ಧ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ಬಗ್ಗೆ ರಾಜ್ಯಪಾಲರೊಂದಿಗೆ ಚರ್ಚಿಸುವುದಾಗಿಯೂ ತಿಳಿಸಿದರು.
source - thatskannada
No comments:
Post a Comment