ಸಾಗುವಳಿ ಜಮೀನನ್ನು ವಶಪಡಿಸಿಕೊಳ್ಳಬಾರದೆಂದು ಉಪವಾಸ ಸತ್ಯಾಗ್ರಹ, ಪ್ರತಿಭಟನೆ ನಡೆಸುತ್ತಿದ್ದ ರೈತರ ಹೋರಾಟಕ್ಕೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ, ರೈತರ ಜಮೀನು ಸ್ವಾಧೀನಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ರೈತರು ತೀವ್ರ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಮೀನು ಸ್ವಾಧೀನ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದು, ಜಮೀನು ಸ್ವಾಧೀನ ಕುರಿತಂತೆ ರೈತರೊಂದಿಗೆ ಚರ್ಚಿಸಿದ ನಂತರವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಆ ನಿಟ್ಟಿನಲ್ಲಿ ದಾವಣಗೆರೆಯಲ್ಲಿನ 2000ಎಕರೆ ಜಮೀನು ಸ್ವಾಧೀನ ಪ್ರಕ್ರಿಯೆಯನ್ನು ಮಾತ್ರ ಕೈಬಿಡಲಾಗಿದೆ ಎಂದು ಕೃಷಿ ಸಚಿವ ರವೀಂದ್ರನಾಥ್ ಸ್ಪಷ್ಟಪಡಿಸಿದ್ದಾರೆ.
ರೈತರು ತಮ್ಮ ಹೋರಾಟವನ್ನು ಕೈಬಿಡಬೇಕೆಂದು ಮನವಿ ಮಾಡಿಕೊಂಡಿರುವ ಮುಖ್ಯಮಂತ್ರಿಗಳು, ದಾವಣಗೆರೆಯ ರೈತರ ಮೇಲಿನ ಎಲ್ಲಾ ಪ್ರಕರಣಗಳನ್ನು ಕೈಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
Source - Webduniya
Subscribe to:
Post Comments (Atom)
No comments:
Post a Comment