VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Jan 7, 2010

ಸುಷ್ಮಾ ಸ್ವರಾಜ್ ಶೀಘ್ರವೇ ಜೈಲಿಗೆ: ಉಗ್ರಪ್ಪ

ಬೆಂಗಳೂರು, ಗುರುವಾರ, 7 ಜನವರಿ 2010: ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಜೈಲಿಗೆ ಹೋಗುವ ದಿನಗಳು ದೂರವಿಲ್ಲ ಎಂದು ವಿಧಾನಪರಿಷತ್‌ನ ಪ್ರತಿಪಕ್ಷದ ನಿವೃತ್ತ ನಾಯಕ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.

ವಿಧಾನಪರಿಷತ್ ಪ್ರತಿಪಕ್ಷ ನಾಯಕನ ಹುದ್ದೆಯಿಂದ ನಿವೃತ್ತಗೊಂಡ ಹಿನ್ನೆಲೆಯಲ್ಲಿ ಗುರುವಾರ ಕಾಂಗ್ರೆಸ್ ಮುಖಂಡರು ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 25ಸಾವಿರ ಕೋಟಿ ರೂಪಾಯಿ ಗಣಿ ಸಂಪತ್ತು ಲೂಟಿಯಾಗುತ್ತಿದೆ. ನನ್ನ ಅಧಿಕಾರದ ಅವಧಿಯಲ್ಲಿ ಇದನ್ನು ತಡೆಯಲು ಸಾಧ್ಯವಾಗಲಿಲ್ಲ. ಆದರೂ ಈ ಬಗ್ಗೆ ಗಟ್ಟಿಯಾದ ಧ್ವನಿಯಿಂದ ಸಾರ್ವಜನಿಕರಿಗೆ ತಿಳಿಸಿದ್ದೇನೆ. ಅಲ್ಲದೆ ಅಕ್ರಮ ಗಣಿ ವಿರುದ್ಧ ಹೋರಾಟ ನಡೆಸಿದ್ದೇನೆ ಎಂದರು.

ವಿಧಾನಪರಿಷತ್ ಪ್ರತಿಪಕ್ಷದ ನಾಯಕನ ಸ್ಥಾನವನ್ನು ಸರಿಯಾಗಿ ನಿರ್ವಹಿಸಿದ್ದೇನೆ. ಆ ಸ್ಥಾನಕ್ಕೆ ಯಾವುದೇ ಕಳಂಕ ತಂದಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

source: webdunia

No comments: