ಬಿಬಿಎಂಪಿಯಲ್ಲಿ ಅಕ್ರಮವಾಗಿ ರೂ. 3,248 ಕೋಟಿ ಮೊತ್ತದ ಕಾಮಗಾರಿಗಳಿಗೆ ಟೆಂಡರ್ ಕರೆದಿರುವ ಪ್ರಕರಣವನ್ನು ಲೋಕಾಯುಕ್ತ ತನಿಖೆಗೊಳಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಆಗ್ರಹಿಸಿದ್ದಾರೆ.
ಉಡುಪಿ: ಬಿಬಿಎಂಪಿಯಲ್ಲಿ ಅಕ್ರಮವಾಗಿ ರೂ. 3,248 ಕೋಟಿ ಮೊತ್ತದ ಕಾಮಗಾರಿಗಳಿಗೆ ಟೆಂಡರ್ ಕರೆದಿರುವ ಪ್ರಕರಣವನ್ನು ಲೋಕಾಯುಕ್ತ ತನಿಖೆಗೊಳಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಆಗ್ರಹಿಸಿದ್ದಾರೆ.
ಬ್ರಹ್ಮಗಿರಿಯಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರೊಂದಿಗಿನ ಬುಧವಾರ ಸಮಾಲೋಚನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ರಾತ್ರಿ ಒಂದೇ ದಿನ ತರಾತುರಿಯಲ್ಲಿ ಬಿಬಿಎಂಪಿ ಟೆಂಡರ್ ಕರೆಯಲಾಗಿದೆ ಎನ್ನುವ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದರು.
ಸರ್ಕಾರ ಸಾರ್ವಜನಿಕರ ಹಣ ಲೂಟಿ ಮಾಡಿ, ಗುತ್ತಿಗೆದಾರರಿಗೆ ನೆರವಾಗುತ್ತಿದೆ. ಬಿಬಿಎಂಪಿ ನೌಕರರಿಗೆ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ತೆರಿಗೆ ಸಂಗ್ರಹದಲ್ಲಿ ವಿಫಲವಾಗಿದೆ ಎಂದು ಟೀಕಿಸಿದ ಅವರು, ಬಿಬಿಎಂಪಿ ಚುನಾವಣೆಯಲ್ಲಿ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಬೆಂಗಳೂರು ಅಭಿವೃದ್ಧಿಗೆ ಈ ಹಿಂದೆ ಬಿಜೆಪಿ ಸರ್ಕಾರ ತಂದಿದ್ದ ಪ್ರಣಾಳಿಕೆಯಲ್ಲಿನ ಕಾರ್ಯಕ್ರಮಗಳಲ್ಲಿ ಶೇ 1ರಷ್ಟಾದರೂ ಅನುಷ್ಠಾನವಾಗಿದ್ದರೆ ನಾನು ಕ್ಷಮೆ ಕೇಳಲು ಸಿದ್ಧ ಎಂದು ಸವಾಲೆಸೆದರು.
ಈಡಿಯಟ್ ಬಳಕೆ; ಸಮರ್ಥನೆ: ವಿಧಾನಸಭೆಯಲ್ಲಿನ ವಿರೋಧಪಕ್ಷ ನಾಯಕ ಸಿದ್ಧರಾಮಯ್ಯ, ಮುಖ್ಯಮಂತ್ರಿಯನ್ನು ‘ಈಡಿಯಟ್’ ಎಂದು ಕರೆದಿರುವುದನ್ನು ಸಮರ್ಥಿಸಿಕೊಂಡ ದೇಶಪಾಂಡೆ, ‘ಈಡಿಯಟ್ ಅಂದ್ರೆ ಕೆಲಸ ಮಾಡದವ ಅನ್ನುವ ಅರ್ಥದಲ್ಲಿ ಅವರು ಆ ಪದ ಬಳಸಿದ್ದಾರೆ ಎಂದು ಅವರು ಹೇಳಿದರು.
Prajavani
Subscribe to:
Post Comments (Atom)
No comments:
Post a Comment