
ಹಿರಿಯ ಸಾಹಿತಿ ಡಾ.ದೇ.ಜವರೇಗೌಡ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ‘ಕರ್ನಾಟಕ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಬೆಂಗಳೂರು: ಹಿರಿಯ ಸಾಹಿತಿ ಡಾ.ದೇ.ಜವರೇಗೌಡ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ‘ಕರ್ನಾಟಕ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
2008ನೇ ಸಾಲಿನ ಪ್ರಶಸ್ತಿಗೆ ದೇಜಗೌ ಮತ್ತು 2009ನೇ ಸಾಲಿನ ಪ್ರಶಸ್ತಿಗೆ ಹೆಗ್ಗಡೆ ಅವರು ಆಯ್ಕೆಯಾಗಿದ್ದಾರೆ.
ನಾಡು-ನುಡಿ, ಜಾನಪದ ಕ್ಷೇತ್ರ, ಅನುವಾದ ಸಾಹಿತ್ಯ ಹಾಗೂ ಒಟ್ಟಾರೆ ಕನ್ನಡ ಸಾರಸ್ವತ ಲೋಕಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ದೇಜಗೌ ಅವರಿಗೆ ಪ್ರಶಸ್ತಿ ನೀಡಲಾಗಿದೆ. ಸಮಾಜ ಸೇವೆ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಸಲ್ಲಿಸಿದ ಅನನ್ಯ ಸೇವೆಗೆ ಹೆಗ್ಗಡೆ ಅವರನ್ನು ಆಯ್ಕೆ ಮಾಡಲಾಗಿದೆ.
ಸಮಿತಿ ಶಿಫಾರಸು ಮಾಡಿದ ಈ ಹೆಸರುಗಳಿಗೆ ಕನ್ನಡ ಮತ್ತು ಸಂಸ್ಕೃತಿ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅನುಮೋದನೆ ನೀಡಿದ್ದಾರೆ.
Pra
javani
No comments:
Post a Comment