‘ಕಾಣೆಯಾದವರ ಬಗ್ಗೆ ಮಾಹಿತಿ ನೀಡುವುದು ಸೇರಿದಂತೆ ಪೊಲೀಸ್ ಇಲಾಖೆಯ ಬಳಕೆಗೆ ನೂತನ ಟಿ.ವಿ ಚಾನೆಲ್ ಆರಂಭಿಸಲು ಪ್ರಸಕ್ತ ಹಣಕಾಸು ವರ್ಷದ ಬಜೆಟ್‌ನಲ್ಲಿ ಒಪ್ಪಿಗೆ ಪಡೆಯಲಾಗುತ್ತದೆ’ ಎಂದು ನಗರ ಪೊಲೀಸ್ ಕಮಿಷನರ್ ಶಂಕರ್ ಬಿದರಿ ತಿಳಿಸಿದ್ದಾರೆ.
ಬೆಂಗಳೂರು: ‘ಕಾಣೆಯಾದವರ ಬಗ್ಗೆ ಮಾಹಿತಿ ನೀಡುವುದು ಸೇರಿದಂತೆ ಪೊಲೀಸ್ ಇಲಾಖೆಯ ಬಳಕೆಗೆ ನೂತನ ಟಿ.ವಿ ಚಾನೆಲ್ ಆರಂಭಿಸಲು ಪ್ರಸಕ್ತ ಹಣಕಾಸು ವರ್ಷದ ಬಜೆಟ್‌ನಲ್ಲಿ ಒಪ್ಪಿಗೆ ಪಡೆಯಲಾಗುತ್ತದೆ’ ಎಂದು ನಗರ ಪೊಲೀಸ್ ಕಮಿಷನರ್ ಶಂಕರ್ ಬಿದರಿ ತಿಳಿಸಿದ್ದಾರೆ.
ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.
‘ಬೆಂಗಳೂರಿನಲ್ಲಿ ಪ್ರತಿ ವರ್ಷ ನೂರಾರು ಜನರು ಕಾಣೆಯಾಗುತ್ತಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಚಾರ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ ಇನ್ನೂ ಹೆಚ್ಚಿನ ಪ್ರಚಾರ ಬೇಕಾಗಿರುವ ಕಾರಣ ಚಾನೆಲ್ ಆರಂಭಿಸಲಾಗುತ್ತಿದೆ. ಇದಕ್ಕೆ ಬಜೆಟ್‌ನಲ್ಲಿ ಅನುಮತಿ ಪಡೆಯಲಾಗುತ್ತದೆ’ ಎಂದು ಅವರು ಮಾಹಿತಿ ನೀಡಿದರು.
‘ಪ್ರತಿ ದಿನ ಎರಡು- ಮೂರು ಅಪರಿಚಿತ ಶವಗಳು ಸಿಗುತ್ತವೆ. ಮೃತರು ಮತ್ತು ಅವರ ಪೋಷಕರು ಯಾರು ಎಂದು ಪತ್ತೆ ಮಾಡುವುದು ಸವಾಲಿನ ಕೆಲಸವಾಗಿದೆ. ಚಾನೆಲ್ ಇದ್ದರೆ ಇಂತಹ ಮಾಹಿತಿಯನ್ನು ಹೆಚ್ಚಾಗಿ ಪ್ರಚಾರ ಮಾಡಬಹುದು. ಇದು ಸಿಬ್ಬಂದಿಗೆ ಅನುಕೂಲವಾಗಲಿದೆ’ ಎಂದರು.
‘ಚಾನೆಲ್‌ನ ರೂಪುರೇಷೆಗಳನ್ನು ತಯಾರಿಸಲಾಗುತ್ತದೆ. ದಿನದ 24 ಗಂಟೆಯೂ ಪ್ರಸಾರ ಮಾಡುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ಚಾನೆಲ್ ಕೇವಲ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿರುವುದಿಲ್ಲ. ರಾಜ್ಯದ ಎಲ್ಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಆಗುಹೋಗುಗಳ ಬಗ್ಗೆ ಸಹ ಕಾರ್ಯಕ್ರಮ ಪ್ರಸಾರ ಮಾಡಲಾಗುತ್ತದೆ’ ಎಂದು ಬಿದರಿ ತಿಳಿಸಿದರು.
ಕಾಣೆಯಾದವರನ್ನು ಪತ್ತೆ ಹಚ್ಚಲು ಸೂಕ್ತ ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದ ನಂತರ ಹೊಸ ಚಾನೆಲ್ ಆರಂಭಿಸುವ ಬಗ್ಗೆ ಇಲಾಖೆ ಚಿಂತನೆ ನಡೆಸಿತ್ತು. ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಸಹ ಈ ಪ್ರಸ್ತಾವ ಮಾಡಲಾಗಿದೆ.
Prajavani
Subscribe to:
Post Comments (Atom)
No comments:
Post a Comment