VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Jan 13, 2010

ಪ್ರಧಾನಿಗೆ ಬಿಡುವು ಇಲ್ಲವಂತೆ: ಯಡಿಯೂರಪ್ಪ ಕಿಡಿ

ಪ್ರಧಾನ ಮಂತ್ರಿಗಳ ಸಂಪರ್ಕಕ್ಕೆ ಸಜ್ಜುಗೊಂಡು ರಾಜ್ಯ ಸರ್ವಪಕ್ಷಗಳ ನಿಯೋಗಕ್ಕೆ ಸಮಯವನ್ನೇ ನೀಡದ ಪ್ರಧಾನಿ ಮನಮೋಹನ್ ಸಿಂಗ್ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬರುವಂತೆ ಪ್ರಧಾನಿ ಕಚೇರಿ ನಡೆದುಕೊಳ್ಳುತ್ತಿದೆ ಎಂದು ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಒಂದು ರಾಜ್ಯದ ಮುಖ್ಯಮಂತ್ರಿ ಸರ್ವಪಕ್ಷಗಳ ಸದಸ್ಯರೊಂದಿಗೆ ರಾಜ್ಯದ ಜಲವಿವಾದ ಕುರಿತು ಚರ್ಚಿಸಲು ಪ್ರಧಾನಿ ಸಮಯ ನೀಡದೇ ಇರುವುದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೇ ಮೊದಲು ಎಂದು ಅತೃಪ್ತಿ ವ್ಯಕ್ತಪಡಿಸಿದರು.

ಪ್ರಧಾನಿ ಕಚೇರಿಯ ಈ ನಿಲುವು ಪಕ್ಷಪಾತದಿಂದ ಕೂಡಿದೆ ಎಂದು ಹೇಳಲು ವಿಷಾದಿಸುತ್ತೇನೆ ಎಂದು ಯಡಿಯೂರಪ್ಪ ತಮ್ಮ ನೋವನ್ನು ಹೊರಹಾಕಿದರು.

ಕಳಸಾ ಬಂಡೂರಿ ನಾಲಾ ಯೋಜನೆಗೆ ಸಂಬಂಧಿಸಿದಂತೆ ಚರ್ಚಿಸಲು ರಾಜ್ಯ ಸರ್ಕಾರದ ನಿಯೋಗ ಪ್ರಧಾನಿ ಭೇಟಿಗೆ ಹೋಗುವುದಾಗಿ ನಿರ್ಧರಿಸಿತ್ತು. ಆದರೆ ಪ್ರಧಾನಿ ಕಚೇರಿ ಸಮಯ ನೀಡದ ಕಾರಣ ಯಡಿಯೂರಪ್ಪ ಕಿಡಿಯಾಗಿದ್ದಾರೆ.

webdunia

No comments: