ಅಲ್ಪಸಂಖ್ಯಾತರನ್ನು ರಕ್ಷಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯಾದ್ಯಂತ ವಿವಿಧ ಚರ್ಚ್‌ಗಳ ಮೇಲೆ ಯಾರು ದಾಳಿ ಮಾಡುತ್ತಿದ್ದಾರೆ ಎಂಬುದನ್ನು ಸರ್ಕಾರ ತನಿಖೆ ಮಾಡುತ್ತಿಲ್ಲ. ವಿನಾಕಾರಣ ಪ್ರತಿಪಕ್ಷದ ಮೇಲೆ ಮುಖ್ಯಮಂತ್ರಿ ದೂರುತ್ತಾರೆ. ಚರ್ಚ್‌ಗಳ ಮೇಲಿನ ದಾಳಿಗೆ ಬಿಜೆಪಿ ಬೆಂಬಲಿತ ಸಂಘ ಪರಿವಾರದವರೇ ಕಾರಣರಾಗಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ರಾಜ್ಯದ ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರ ಎಲ್ಲಾ ರಂಗದಲ್ಲಿಯೂ ವಿಫಲವಾಗಿದೆ. ಮಿತಿ ಮೀರಿದ ಭ್ರಷ್ಟಾಚಾರ ಇಡೀ ರಾಜ್ಯದಲ್ಲಿ ತಾಂಡವವಾಡುತ್ತಿದೆ ಎಂದು ಈ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆಂದೂ ಈ ರೀತಿ ಮುಖ್ಯಮಂತ್ರಿ ಕುರ್ಚಿಗೆ ಇಷ್ಟೊಂದು ಅಗೌರವ ಕಂಡು ಬಂದಿದ್ದನ್ನು ತಾವೆಂದೂ ಕಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
webdunia
Subscribe to:
Post Comments (Atom)
No comments:
Post a Comment