VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Jan 14, 2010

ಲೈಂಗಿಕ ದೌರ್ಜನ್ಯ: ಕಾನೂನು ಬದಲಾವಣೆಗೆ ಆಗ್ರಹ

ಈಗಿರುವ ಕಾನೂನಿನ ಪ್ರಕಾರ, ಅತ್ಯಾಚಾರ ಮಾಡಿದವರಿಗೆ ಗರಿಷ್ಠ 2 ವರ್ಷಗಳ ಶಿಕ್ಷೆ ವಿಧಿಸಬಹುದಾಗಿದೆ. ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಅಥವಾ 7 ವರ್ಷಗಳ ಜೈಲು ಶಿಕ್ಷೆ ನೀಡುವಂತಾಗಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಗಿರಿಜಾ ವ್ಯಾಸ್ ಹೇಳಿದರು.


ನವದೆಹಲಿ (ಪಿಟಿಐ): ರುಚಿಕಾ ಪ್ರಕರಣದ ಹಿನ್ನೆಲೆಯಲ್ಲಿ ಬುಧವಾರ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರನ್ನು ಭೇಟಿ ಮಾಡಿದ್ದ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ಗಿರಿಜಾ ವ್ಯಾಸ್, ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದ ಕಾನೂನು ಬದಲಾವಣೆಗೆ ಆಗ್ರಹಿಸಿದರು.

ಅತ್ಯಾಚಾರ, ಲೈಂಗಿಕ ದೌರ್ಜನ್ಯಕ್ಕೆ ಕಾರಣರಾಗುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅದರಲ್ಲೂ ಇಂತಹ ಕೃತ್ಯಗಳು ಪೊಲೀಸ್ ಅಧಿಕಾರಿಗಳಂತಹ ಸರ್ಕಾರಿ ನೌಕರರಿಂದ ನಡೆದರೆ ಅವರಿಗೆ ಇನ್ನೂ ಹೆಚ್ಚಿನ ಪ್ರಮಾಣದ ಶಿಕ್ಷೆ ವಿಧಿಸುವಂತಾಗಬೇಕು ಎಂದು ಸಚಿವರ ನಾರ್ತ್ ಬ್ಲಾಕ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವ್ಯಾಸ್ ಒತ್ತಾಯಿಸಿದರು.
ಈ ನಿಟ್ಟಿನಲ್ಲಿ ತುರ್ತಾಗಿ ಕಾನೂನುಗಳನ್ನು ಬದಲಾವಣೆ ಮಾಡಬೇಕಾಗಿದೆ ಎಂದು ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಭಿಪ್ರಾಯಪಟ್ಟರು.

ಈಗಿರುವ ಕಾನೂನಿನ ಪ್ರಕಾರ, ಅತ್ಯಾಚಾರ ಮಾಡಿದವರಿಗೆ ಗರಿಷ್ಠ 2 ವರ್ಷಗಳ ಶಿಕ್ಷೆ ವಿಧಿಸಬಹುದಾಗಿದೆ. ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಅಥವಾ 7 ವರ್ಷಗಳ ಜೈಲು ಶಿಕ್ಷೆ ನೀಡುವಂತಾಗಬೇಕು ಎಂದು ಹೇಳಿದರು.

ಬಹುತೇಕ ಅತ್ಯಾಚಾರ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸದ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿದರು. ರಾಜ್ಯ- ಕೇಂದ್ರ ಸಹಭಾಗಿತ್ವದ ಸಚಿವರ ಸಮಿತಿ ಕೇಂದ್ರ ಗೃಹ ಸಚಿವಾಲಯದ ನೇತೃತ್ವದಲ್ಲಿ ಈಗಾಗಲೇ ಲೈಂಗಿಕ ಹಿಂಸಾಚಾರಗಳಿಗೆ ಸಂಬಂಧಿಸಿದ ಕಾನೂನುಗಳನ್ನು ಪರಿಶೀಲನೆಗೆ ಒಳಪಡಿಸಿದೆ ಎಂದು ಚಿದಂಬರಂ ಸಭೆಯಲ್ಲಿ ಖಚಿತಪಡಿಸಿದರು.

Prajavani

No comments: