VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Jan 6, 2010

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ: ಅನಂತಮೂರ್ತಿ ಭವಿಷ್ಯ


ಬೆಂಗಳೂರು, ಬುಧವಾರ, 6 ಜನವರಿ 2010: ಎಡಪಂಥೀಯ ಗುಂಪುಗಳೆಲ್ಲಾ ಒಟ್ಟಾಗಿ ಮನುಷ್ಯ ಕೇಂದ್ರಿತ ಅರ್ಥವ್ಯವಸ್ಥೆಯನ್ನು ರೂಪಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು.ಆರ್.ಅನಂತಮೂರ್ತಿ, ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ತಿಳಿಸಿದ್ದಾರೆ.

ಮಂಗಳವಾರ ನಗರದ ಭಾರತೀಯ ವಿದ್ಯಾಭವನ ಇವಿಎಸ್ ಸಭಾಂಗಣದಲ್ಲಿ ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಏರ್ಪಡಿಸಿದ್ದ ಶ್ರೀಸಾಮಾನ್ಯರ ಬದುಕಿನ ಮೇಲೆ ಬೆಲೆ ಏರಿಕೆ ಪರಿಣಾಮ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಲಜ್ಜೆಗೇಡಿತನದಿಂದ ಹಣ ಸಂಪಾದಿಸುವುದು, ಅದರಿಂದ ಮಾನಗೇಡಿ ರಾಜಕಾರಣ ನಡೆಸುತ್ತಿರುವುದೇ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಗಣಿಧಣಿಗಳಿಂದಾಗಿ ಪ್ರಜಾಪ್ರಭುತ್ವದ ವ್ಯವಸ್ಥೆಯೇ ಅರ್ಥಹೀನ ಎಂಬಂತಾಗಿದೆ ಎಂದರು.

ಅಲ್ಲದೇ, ರೈತರ ಹೆಸರಿನಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ ಸರ್ಕಾರವೇ ಇದೀಗ ರೈತರ ಕೈಗೆ ಕೋಳ ತೊಡಿಸಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವಂತಹ ಘಟನೆ ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ. ರೈತರು ಬಹುದೊಡ್ಡ ಶಕ್ತಿ ಎಂಬುದನ್ನು ಮರೆಯಬಾರದು. ಅವರ ಹಕ್ಕುಗಳನ್ನು ಬಲವಂತವಾಗಿ ಕಸಿಯಲು ಹೊರಟಿರುವ ಬಿಜೆಪಿ ಕಾರ್ಯವೈಖರಿ ಸರ್ಕಾರದ ಉದ್ದಟತನದ ಪರಮಾವಧಿಯಾಗಿದೆ ಎಂದು ಹೇಳಿದರು.

No comments: