ತೀರ್ಪಿಗೆ ಬದ್ಧ: ಅಂಜುಮನ್
ಹುಬ್ಬಳ್ಳಿ: ನಗರದ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ತಮ್ಮ ಸುದೀರ್ಘ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದರೆ, ಇದು ಯಾರ ಸೋಲು-ಗೆಲುವು ಅಲ್ಲ; ತೀರ್ಪಿಗೆ ನಾವು ಬದ್ಧವಾಗಿರುತ್ತೇವೆ ಎಂದು ಅಂಜುಮನ್-ಎ- ಇಸ್ಲಾಂ ಪದಾಧಿಕಾರಿಗಳು ಹೇಳಿದ್ದಾರೆ.
ನಗರದ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ತಮ್ಮ ಸುದೀರ್ಘ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದಾರೆ.
ಈದ್ಗಾ ತೀರ್ಪಿಗೆ ಬಿಜೆಪಿ ಹರ್ಷ
ಹುಬ್ಬಳ್ಳಿ: ನಗರದ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ತಮ್ಮ ಸುದೀರ್ಘ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದರೆ, ಇದು ಯಾರ ಸೋಲು-ಗೆಲುವು ಅಲ್ಲ; ತೀರ್ಪಿಗೆ ನಾವು ಬದ್ಧವಾಗಿರುತ್ತೇವೆ ಎಂದು ಅಂಜುಮನ್-ಎ- ಇಸ್ಲಾಂ ಪದಾಧಿಕಾರಿಗಳು ಹೇಳಿದ್ದಾರೆ.
ಬುಧವಾರ ನವದೆಹಲಿಯಲ್ಲಿ ತೀರ್ಪು ನೀಡುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನಲ್ಲೇ ಉಪಸ್ಥಿತರಿದ್ದ ಧಾರವಾಡ ಲೋಕಸಭೆ ಸದಸ್ಯ ಪ್ರಹ್ಲಾದ ಜೋಶಿ, ‘ನಾವು ಮಾಡಿದ ದೀರ್ಘಕಾಲದ ಹೋರಾಟಕ್ಕೆ ಸಂದ ಜಯ ಇದಾಗಿದೆ’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ‘ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿಯುವ ಸ್ಪಷ್ಟ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ. ಈದ್ಗಾ ಮೈದಾನದ ಒಡೆತನವು ಮಹಾನಗರ ಪಾಲಿಕೆಗೆ ಸೇರಿದ್ದು, ಎರಡು ಬಾರಿ ನಮಾಜು ಸಲ್ಲಿಸಲು ಮಾತ್ರ ಮುಸ್ಲಿಂ ಸಮುದಾಯಕ್ಕೆ ಅವಕಾಶ ಇದೆ ಎಂದು ತೀರ್ಪಿನಲ್ಲಿ ಹೇಳಲಾಗಿದೆ’ ಎಂದೂ ಅವರು ಹೇಳಿದ್ದಾರೆ.
ಈ ತೀರ್ಪು ಸಾರ್ವಜನಿಕರ ಹೋರಾಟಕ್ಕೆ ದೊರೆತ ಜಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ ಜಗದೀಶ ಶೆಟ್ಟರ ಅವರೂ ಹೇಳಿದ್ದಾರೆ.
ಈ ತೀರ್ಪು ಯಾರ ಗೆಲುವೂ ಅಲ್ಲ, ಸೋಲೂ ಅಲ್ಲ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ಬದ್ಧವಾಗಿದ್ದೇವೆ ಎಂದು ಅಂಜುಮನ್- ಎ- ಇಸ್ಲಾಂ ಅಧ್ಯಕ್ಷ ಮಹಮ್ಮದ್ ಯುಸೂಫ್ ಸವಣೂರು ಹಾಗೂ ಹಾಸ್ಪಿಟಲ್ ಬೋರ್ಡ್ ಕಾರ್ಯದರ್ಶಿ ಅಲ್ತಾಫ್ ಕಿತ್ತೂರ ಹೇಳಿದ್ದಾರೆ.
ಈದ್ಗಾ ಮೈದಾನ ಜಾಗೆಯಲ್ಲಿ ಕಟ್ಟಡ ನಿರ್ಮಿಸಲು ಅವಕಾಶ ಕೋರಿ ನಾವು ಸಲ್ಲಿಸಿದ ಮೇಲ್ಮನವಿಯನ್ನು ತಿರಸ್ಕರಿಸಲಾಗಿದೆ. ಇದೇ ವೇಳೆ ಶೆಟ್ಟರ್ ಎಂಬುವರು ಸಾರ್ವಜನಿಕ ಬಳಕೆಗೆ ಈ ಜಾಗ ನೀಡಬೇಕೆಂದು ಕೋರಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ತಿರಸ್ಕರಿಸಲಾಗಿದೆ. ಈ ಭೂಮಿಯ ಒಡೆತನ ಪಾಲಿಕೆಗೆ ಸೇರಿದ್ದು, 999 ವರ್ಷಗಳವರೆಗೆ ನೀಡಲಾಗಿರುವ ಕರಾರು ಗುತ್ತಿಗೆ ಮುಂದುವರಿಯಲಿದೆ. ಹುಬ್ಬಳ್ಳಿ- ಧಾರವಾಡ ಅವಳಿ ನಗರದಲ್ಲಿ ಶಾಂತಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಈ ತೀರ್ಪು ಮಹತ್ವದ್ದಾಗಿದೆ ಎಂದೂ ಅವರು ಹೇಳಿದ್ದಾರೆ.
Prajavani
Prajavani
Subscribe to:
Post Comments (Atom)
No comments:
Post a Comment