ಗುಳೇದಗುಡ್ಡ, ಜ. 19 : ಪಟ್ಟಣದ ನಡುವಿನ ಪೇಟೆಯಲ್ಲಿ ಗಣಪತಿ ದೇವಸ್ಥಾನದಲ್ಲಿರುವ ಈಶ್ವರ್ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಘಟನೆಗೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ತರು ಮತ್ತು ಹಿಂದು ಪರ ಸಂಘಟನೆಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವ ಘಟನೆ ನಡೆದಿದೆ. ವಾತಾವರಣ ಬೂದಿಮುಚ್ಚಿದ ಕೆಂಡದಂತಿದ್ದ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.
ಗಣಪತಿ ದೇವಸ್ಥಾನದ ಈಶ್ವರಮೂರ್ತಿ ಭಗ್ನಗೊಳಿಸಿದ್ದ ಘಟನೆಗೆ ಸಂಬಂಧಿಸಿದಂತೆ ಪಟ್ಟಣದಲ್ಲಿ ಅಘೋಷಿತ ವಾತಾವರಣ ಕಂಡು ಬಂದಿದೆ. ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಘಟನೆಗೆ ಕಾರಣರಾದ ಆರೋಪಿಗಳನ್ನು ಬಂಧಿಸಬೇಕು ಎಂದು ಹಿಂದು ಪರ ಸಂಘಟನೆಗಳ ಮುಖ್ಯಸ್ಥರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
thatskannada
Subscribe to:
Post Comments (Atom)
No comments:
Post a Comment