
ಗದಗ:76ನೇ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಸಿದ್ದತೆಗಳು ಪೂರ್ಣಗೊಂಡಿದ್ದು, ಶುಕ್ರವಾರ ಆರಂಭಗೊಳ್ಳಲಿರುವ ಅಕ್ಷರ ಜಾತ್ರೆಗಾಗಿ ಕ್ಷಣಗಣನೆ ಆರಂಭಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
48ವರ್ಷಗಳ ನಂತರ ಗದಗ ಜಿಲ್ಲೆಯಲ್ಲಿ 2ನೇ ಬಾರಿ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು, ಊಟ, ವಸತಿ ಸೇರಿದಂತೆ ಎಲ್ಲ ಅಗತ್ಯ ಸಿದ್ದತೆಗಳು ಅಂತ್ಯಗೊಂಡಿದ್ದು, ನಾಳೆ ವಿಧ್ಯುಕ್ತವಾಗಿ ಚಾಲನೆಗೊಳ್ಳಲಿದೆ ಎಂದು ಹೇಳಿದರು.
ಸಮ್ಮೇಳನದಲ್ಲಿ ವಿಚಾರಗೋಷ್ಠಿ, ಕವಿಗೋಷ್ಠಿ ಸೇರಿದಂತೆ ಹಲವಾರು ಗೋಷ್ಠಿಗಳು ನಡೆಯಲಿದೆ. ಮೂರು ದಿನಗಳ ಕಾಲದ ಸಾಹಿತ್ಯ ತೇರು ಖ್ಯಾತ ಸಾಹಿತಿ ಗೀತಾನಾಗಭೂಷಣ್ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದರು.
ಸಮ್ಮೇಳನಕ್ಕೆ ಸುಮಾರು 3ರಿಂದ 4ಲಕ್ಷ ಸಾಹಿತ್ಯಾಭಿಮಾನಿಗಳು ಸೇರುವ ನಿರೀಕ್ಷೆ ಇದ್ದು, ಅವರೆಲ್ಲರಿಗೂ ಊಟ, ವಸತಿ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ಪಾಲ್ಗೊಂಡಿದ್ದು, ನಾಳೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದ ಅವರು, ಸಮಾರಂಭವನ್ನು ತಾವೇ ಉದ್ಘಾಟಿಸುವುದಾಗಿ ಹೇಳಿದರು. ಅಲ್ಲದೇ ಮುಖ್ಯಮಂತ್ರಿಗಳು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.
No comments:
Post a Comment