VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Feb 1, 2010

ಸಿಎಂ ಯಡಿಯೂರಪ್ಪ ನಾಯಕತ್ವಕ್ಕೆ ಗಡ್ಕರಿ ಶಬ್ಬಾಸ್‌ಗಿರಿ

ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಇಡೀ ರಾಷ್ಟ್ರೀಯ ಬಿಜೆಪಿ ಅವರ ಬೆನ್ನಿಗಿದೆ. ಆ ನಿಟ್ಟಿನಲ್ಲಿ ಅವರು ನಿಶ್ಚಿಂತೆಯಿಂದ ಸರ್ಕಾರವನ್ನು ಮುನ್ನಡೆಸಲಿ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಬೆಂಬಲ ಘೋಷಿಸಿದ್ದಾರೆ.

ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಿದೆ. ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ.

ಯಡಿಯೂರಪ್ಪ ಎಲ್ಲಾ ವಿವಾದಗಳ ನಡುವೆಯೂ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಅವರು ಇದೇ ರೀತಿ ಒಳ್ಳೆಯ ಕಾರ್ಯಗಳನ್ನು ಮುನ್ನಡೆಸಿಕೊಂಡು ಹೋಗಲಿ ಎಂದು ಹಾರೈಸಿದರು.

ಅಲ್ಲದೇ, ನಾನು ಅಧಿಕಾರ ವಿಕೇಂದ್ರೀಕರಣದಲ್ಲಿ ನಂಬಿಕೆ ಇಟ್ಟವನು. ಮೊದಲಿನಿಂದಲೂ ಇದನ್ನೇ ಪ್ರತಿಪಾದಿಸುತ್ತಾ ಬಂದಿದ್ದೇನೆ. ಹಾಗಾಗಿ ಭಿನ್ನಮತ, ಬಹಿರಂಗ ಹೇಳಿಕೆಗಳನ್ನು ಸಹಿಸೋಲ್ಲ ಎಂದು ಸ್ಪಷ್ಟಪಡಿಸಿದರು.

ಆಂತರಿಕ ವಿಚಾರಗಳನ್ನು ಅಥವಾ ಭಿನ್ನಾಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲೇ ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಈ ಬಗ್ಗೆ ಮಾಧ್ಯಮಗಳ ಮೂಲಕ ಬಹಿರಂಗ ಹೇಳಿಕೆ ನೀಡುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾರೆ ಎಂದರು.

webdunia

No comments: