ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಅಲ್ಲಿನ ಮುಖಂಡರೊಂದಿಗೆ ಭಾರತದಲ್ಲಿರುವ ಭದ್ರತಾ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಿದರು.
ವೆಲ್ಲಿಂಗ್‌ಟನ್(ಐಎಎನ್‌ಎಸ್): ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಅಲ್ಲಿನ ಮುಖಂಡರೊಂದಿಗೆ ಭಾರತದಲ್ಲಿರುವ ಭದ್ರತಾ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಿದರು.
ಲೇಬರ್ ಪಕ್ಷದ ವಿದೇಶಾಂಗ ವ್ಯವಹಾರಗಳ ವಕ್ತಾರ ಕ್ರಿಸ್ ಚಾರ್ಟರ್ ಅವರು ಭಾರತದಲ್ಲಿನ ಭದ್ರತಾ ವ್ಯವಸ್ಥೆಯ ಬಗ್ಗೆ ರಾಹುಲ್ ಗಾಂಧಿ ಅವರೊಂದಿಗೆ ಮಂಗಳವಾರ ರಾತ್ರಿ ಚರ್ಚಿಸಿದ್ದಾಗಿ ತಿಳಿಸಿದ್ದಾರೆ.
ಭಯೋತ್ಪಾದಕರ ಬೆದರಿಕೆ ಹೊರತಾಗಿಯೂ ಭಾರತದಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ ಇದೆ. ಅದಕ್ಕಾಗಿ ಎಲ್ಲಾ ಮಾರ್ಗೋಪಾಯಗಳನ್ನು ಕಂಡುಹಿಡಿಯಲಾಗಿದೆ. ಮಾತುಕತೆಯ ನಂತರ ಭಾರತದಲ್ಲಿನ ಪರಿಸ್ಥಿತಿ ಬಗ್ಗೆ ತಮಗೆ ಸಮಾಧಾನವಾಗಿದೆ ಎಂದು ಅವರು ‘ನ್ಯೂಜಿಲೆಂಡ್ ಹೆರಾಲ್ಡ್‌ಗೆ’ ತಿಳಿಸಿದ್ದಾರೆ.
ಭಯೋತ್ಪಾದಕರ ಬೆದರಿಕೆಗೆ ಸೊಪ್ಪು ಹಾಕದೆ, ಅವರನ್ನು ಬಗ್ಗು ಬಡಿಯಲು ಭಾರತದ ಭದ್ರತಾ ವ್ಯವಸ್ಥೆ ಕಟಿಬದ್ಧವಾಗಿದೆ ಎನ್ನುವುದನ್ನು ಚರ್ಚೆಯ ಸಂದರ್ಭದಲ್ಲಿ ರಾಹುಲ್ ಮನವರಿಕೆ ಮಾಡಿಕೊಟ್ಟರು.
ಪ್ರಜಾವಾಣಿ ವಾರ್ತೆ
Subscribe to:
Post Comments (Atom)
No comments:
Post a Comment