VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Feb 18, 2010

ಸುಪ್ರೀಂ ಕೋರ್ಟ್ ತೀರ್ಪು: ರೆಡ್ಡಿ ಸ್ವಾಗತ

ಸಿಬಿಐ ತನಿಖೆಗೆ ಆದೇಶಿಸಲು ರಾಜ್ಯ ಸರ್ಕಾರಗಳ ಅನುಮೋದ ನೆಯ ಅಗತ್ಯವಿಲ್ಲ. ಹೈಕೋರ್ಟ್‌ಗಳೇ ನೇರವಾಗಿ ಆದೇಶಿ ಸುವ ಅಧಿಕಾರವಿದೆ ಎಂದು ತೀರ್ಪಿ ನಲ್ಲಿ ತಿಳಿಸಲಾಗಿದೆ.

ಬಳ್ಳಾರಿ: ಯಾವುದೇ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ದೊಡ್ಡ ಹುದ್ದೆಯ ವ್ಯಕ್ತಿಗಳ ವಿರುದ್ಧ ಭ್ರಷ್ಟಾ ಚಾರದ ಆರೋಪ ಕೇಳಿ ಬಂದಾಗ ಸಿಬಿಐ ತನಿಖೆಗೆ ವಹಿಸುವ ಅಧಿಕಾರ ಹೈಕೋರ್ಟ್‌ಗಳಿಗೇ ಇದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ನೀಡಿರುವ ತೀರ್ಪು ಸ್ವಾಗತಾರ್ಹ ಎಂದು ಪ್ರವಾಸೋ ದ್ಯಮ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಜಿ. ಜನಾರ್ದನ ರೆಡ್ಡಿ ಹೇಳಿದ್ದಾರೆ.

ಸಿಬಿಐ ತನಿಖೆಗೆ ಆದೇಶಿಸಲು ರಾಜ್ಯ ಸರ್ಕಾರಗಳ ಅನುಮೋದ ನೆಯ ಅಗತ್ಯವಿಲ್ಲ. ಹೈಕೋರ್ಟ್‌ಗಳೇ ನೇರವಾಗಿ ಆದೇಶಿ ಸುವ ಅಧಿಕಾರವಿದೆ ಎಂದು ತೀರ್ಪಿ ನಲ್ಲಿ ತಿಳಿಸಲಾಗಿದೆ. ಇದು ದೇಶದ ಜನಸಾಮಾನ್ಯರಿಗೂ ಅನುಕೂಲ ವಾಗು ವಂಥ ತೀರ್ಪು ಎಂದು ಬುಧ ವಾರ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು.

ಮಾಜಿ ಸಿ.ಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತಾವು ಮಾಡಿದ್ದ ರೂ. 150 ಕೋಟಿ ಲಂಚದ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎನ್ನುವ ವಿಚಾರ ಸುಪ್ರೀಂ ಕೋರ್ಟ್‌ವರೆಗೆ ಹೋಗಿತ್ತು. ಪಶ್ಚಿಮ ಬಂಗಾಳ ರಾಜ್ಯದ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣಗಳ ಹಿನ್ನೆಲೆಯಲ್ಲಿ ತೀರ್ಪು ಹೊರ ಬಿದ್ದಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ವಾರ್ತೆ

No comments: