VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Feb 17, 2010

‘ಜಾತಿ ಹೆಸರಲ್ಲಿ ಪ್ರಚೋದನೆ ಸಲ್ಲ’

ಜಾತಿಯ ಹೆಸರಿನಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವವರ ವಿರುದ್ದ ಮಕ್ಕಳು ಜಾಗೃತರಾಗಬೇಕು ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರು: ಜಾತಿಯ ಹೆಸರಿನಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವವರ ವಿರುದ್ದ ಮಕ್ಕಳು ಜಾಗೃತರಾಗಬೇಕು ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದರು.

ಸಂದೇಶ್ ಯುವ ವೇದಿಕೆ ನಗರದ ನಯನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ವಾರ್ಷಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಬಾಲ್ಯದಲ್ಲಿ ಸರ್ವ ಸಮುದಾಯದೊಂದಿಗೆ ಒಂದಾಗಿರುವ ಮಕ್ಕಳು, ಬೆಳೆದಂತೆ ಜಾತಿಯ ಹೆಸರಿನಲ್ಲಿ ಕೋಮುವಾದಿಗಳಾಗುತ್ತಿರುವುದು’ ಬೇಸರದ ಸಂಗತಿ ಎಂದರು.

ಇಂದು ಹಲವಾರು ಸಂಘ ಸಂಸ್ಥೆಗಳು ಕೇವಲ ನಾಮಕಾವಾಸ್ಥೆಗೆ ಮಾತ್ರ ಇದ್ದು, ಸಕ್ರಿಯವಾಗಿ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದಿರುವುದರಲ್ಲಿ ಕಳೆದ ಹದಿನೆಂಟು ವರ್ಷಗಳಿಂದ ಸಕ್ರಿಯವಾಗಿ ಸಮಾಜಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿರುವ ಸಂದೇಶ್ ಯುವ ವೇದಿಕೆ ಇತರ ಸಂಘಟನೆಗಳಿಗೆ ಮಾದರಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ನಂತರ ಮಾತನಾಡಿದ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ‘ಇಂದು ಎಲ್ಲೆಡೆ ಸ್ವಾರ್ಥ ಎದ್ದು ಕಾಣುತ್ತಿದೆ. ಕೇವಲ ತಾನು ತನ್ನದು ಎನ್ನುವ ಮನೋಭಾವ ಬೆಳೆಯುತ್ತಿರುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ ಎಂದರು.

ಕಷ್ಟದಲ್ಲಿರುವವರಿಗೆ ಸ್ಪಂದಿಸುವ ಗುಣವನ್ನು ಮಕ್ಕಳು ಬಾಲ್ಯದಿಂದಲೇ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಬಡಮಕ್ಕಳಿಗೆ ಉಚಿತ ನೋಟ್‌ಪುಸ್ತಕಗಳ ವಿತರಣೆ ಅನಾಥ ವೃದ್ಧರಿಗೆ ಉಚಿತ ಸೀರೆ, ಧೋತಿ ವಿತರಿಸಲಾಯಿತು. ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು
ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಗಾಯಕ ಡಾ.ಶಿವಮೊಗ್ಗ ಸುಬ್ಬಣ್ಣ, ಭವಾನಿ ಪೀಠದ ಸುರೇಶ್ವರಾನಂದ ಸ್ವಾಮಿ, ಟೆಂಪಲ್ ಆಫ್ ಸಕ್ಸಸ್ ರಘುನಾಥ ಗುರೂಜಿ, ಕೊಳದ ಮಹಾಸಂಸ್ಥಾನ ಮಠದ ಶಾಂತವೀರ ಸ್ವಾಮಿ, ನಟ ರಾಜೇಶ್ ಭಾಗವಹಿಸಿದ್ದರು.

ಪ್ರಜಾವಾಣಿ ವಾರ್ತೆ

No comments: