ಹೈದರಾಬಾದ್ (ಐಎಎನ್ಎಸ್): ಇಲ್ಲಿನ ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ವಿಧಾನಸಭೆವರೆಗೆ ಮೆರವಣಿಗೆ ಹಮ್ಮಿಕೊಂಡಿದ್ದ ನೂರಾರು ವಿದ್ಯಾರ್ಥಿಗಳನ್ನು ಪೊಲೀಸರು ತಡೆದಿದ್ದಾರೆ. ಹಲವು ರಸ್ತೆಗಳಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ. ಸ್ಥಳೀಯ ರೈಲುಗಳನ್ನೂ ಕೂಡ ರದ್ದುಪಡಿಸಲಾಗಿದೆ.
ವಿಶ್ವವಿದ್ಯಾಲಯ ಆವರಣದಲ್ಲಿರುವ ಕಲಾ ಕಾಲೇಜಿನಿಂದ ನೂರಾರು ವಿದ್ಯಾರ್ಥಿಗಳು ನಿಷೇದಾಜ್ಞೆ ಉಲ್ಲಂಘಿಸಿ ಮೆರವಣಿಗೆ ಹೊರಟರು. ಇವರನ್ನು ವಿದ್ಯಾನಗರ ಸಮೀಪ ಪೊಲೀಸರು ತಡೆದಿದ್ದಾರೆ.
ಇದಕ್ಕೂ ಮುಂಚೆ ವಿಶ್ವವಿದ್ಯಾಲಯದ ಕುಲಪತಿ ಅವರು ವಿದ್ಯಾರ್ಥಿಗಳು ಮೆರವಣಿಗೆ ಹೊರಟಬಾರದೆಂದು ಹಾಗೂ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಉದ್ರಿಕ್ತ ವಿದ್ಯಾರ್ಥಿಗಳು ಅವರ ಕಾರಿನ ಗಾಜುಗಳನ್ನು ಪುಡಿ ಮಾಡಿದರು.
ನಿಜಾಂ ಕಾಲೇಜು, ಸಿಟಿ ಕಾಲೇಜುಗಳಲ್ಲಿ ಪೊಲೀಸರು ವಿದ್ಯಾರ್ಥಿಗಳು ಮೆರವಣಿಗೆ ಹೊರಡದಂತೆ ಪ್ರತಿಬಂಧಿಸಿದ್ದಾರೆ.
ವಿಧಾನಸಭೆಯನ್ನು ಸಂಪರ್ಕಿಸುವ ಬಹುತೇಕ ರಸ್ತೆಗಳಲ್ಲಿ ಸಂಚಾರವನ್ನು ಪೊಲೀಸರು ನಿಷೇಧಿಸಿದ್ದಾರೆ. ಸುಮಾರು 20 ಸಾವಿರ ಮಂದಿ ಪೊಲೀಸರನ್ನು ರಕ್ಷಣೆಗಾಗಿ ನಿಯೋಜಿಲಾಗಿದೆ.
ಜಂಟಿ ಕ್ರಿಯಾ ಸಮಿತಿಯು ತೆಲಂಗಾಣ ಪ್ರದೇಶದ ಚುನಾಯಿತ ಪ್ರತಿನಿಧಿಗಳು ರಾಜೀನಾಮೆ ನೀಡಬೇಕೆಂದು ಕರೆ ನೀಡಿ ಹಮ್ಮಿಕೊಂಡಿರುವ ಉಸ್ಮಾನಿಯಾ ವಿಶ್ವವಿದ್ಯಾನಿಲಯದಿಂದ ವಿಧಾನಸಭೆಯವರೆಗಿನ ಮೆರವಣಿಗೆಯನ್ನು ಪೊಲೀಸರು ಕಾನೂನು ಬಾಹಿರ ಎಂದು ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ರೋಸಯ್ಯ ಅವರು ಶನಿವಾರ ಮಧ್ಯಾಹ್ನ ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೆರವಣಿಗೆಯನ್ನು ಕೈ ಬಿಡಬೇಕೆಂದು ಪೊಲೀಸರು ಸೂಚಿಸಿದ್ದಾರೆ.
ಇಡೀ ನಗರದಲ್ಲಿ ಉದ್ವಿಗ್ನ ವಾತಾವರಣ ನೆಲೆಸಿದ್ದು, ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
source: prajavani
Feb 20, 2010
Subscribe to:
Post Comments (Atom)
No comments:
Post a Comment