ಬೆಂಗಳೂರು, ಗುರುವಾರ, 18 ಫೆಬ್ರವರಿ 2010 : ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯನ್ನು ವಿರೋಧಿಸಿ ಗೋಮಾಂಸ ಅಡುಗೆ ತಯಾರಿಸಿ ಊಟ ಮಾಡುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಗುರುವಾರ ನಗರದಲ್ಲಿ ನಡೆದಿದೆ.
ಗೋ ಹತ್ಯೆ ನಿಷೇಧ ಕುರಿತಂತೆ ಈಗಾಗಲೇ ರಾಜ್ಯಾದ್ಯಂತ ಪರ-ವಿರೋಧ ಚರ್ಚೆ ನಡೆಯುತ್ತಿರುವ ತನ್ಮಧ್ಯೆಯೇ ಬೆಂಗಳೂರು ವಿಶ್ವ ವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿಯೇ ಇಂದು ದಲಿತ ವಿದ್ಯಾರ್ಥಿಗಳು ದನದ ಮಾಂಸದ ಅಡುಗೆ ಮಾಡಿ ಊಟ ಮಾಡಿ, ಗೋ ಹತ್ಯೆ ನಿಷೇಧಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.
ಗೋ ಹತ್ಯೆ ನಿಷೇಧವನ್ನು ಕೇವಲ ಒಂದು ಸಮುದಾಯದ ದೃಷ್ಟಿಯಿಂದ ನೋಡಬಾರದು ಎಂದಿರುವ ದಲಿತ ಒಕ್ಕೂಟದ ಪ್ರತಿಭಟನಾಕಾರರು, ಗೋ ಮಾಂಸವನ್ನು ಎಲ್ಲ ವರ್ಗದ ಜನರು ಸೇವಿಸುತ್ತಾರೆ. ಅಲ್ಲದೇ ಗೋವು ಕೇವಲ ಮಾಂಸಕ್ಕಾಗಿ ಮಾತ್ರ ಬಳಕೆಯಾಗುತ್ತಿಲ್ಲ. ಅದರಿಂದ ಚರ್ಮದ್ಯೋಗ ನಡೆಯುತ್ತದೆ ಎಂದು ಹೇಳಿದರು.
ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿ ಮಾಡುವ ಮೂಲಕ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವುದಾಗಿ ಪ್ರತಿಭಟನಾಕಾರರು ಆರೋಪಿಸಿದರು.
source: webdunia
Feb 19, 2010
Subscribe to:
Post Comments (Atom)
No comments:
Post a Comment