ರಾಜ್ಯಕ್ಕೆ ಆದ್ಯತೆ ನೀಡಿ
ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ ಆರು ರೈಲ್ವೆ ಮಾರ್ಗಗಳ ಕಾಮಗಾರಿಯೂ ಸೇರಿದಂತೆ ಪ್ರಸಕ್ತ ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ ಆರು ರೈಲ್ವೆ ಮಾರ್ಗಗಳ ಕಾಮಗಾರಿಯೂ ಸೇರಿದಂತೆ ಪ್ರಸಕ್ತ ರೈಲ್ವೆ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿದ್ದಾರೆ.
ಇದೇ 15ರಂದು ಮಮತಾ ಅವರಿಗೆ ಬರೆದ ಪತ್ರದಲ್ಲಿ ತಾಳಗುಪ್ಪ-ಹೊನ್ನಾವರ (83 ಕಿ.ಮೀ), ಶಿವಮೊಗ್ಗ-ಹರಿಹರ (84 ಕಿ.ಮೀ), ಕುಡಚಿ-ಬಾಗಲಕೋಟೆ (142 ಕಿ.ಮೀ), ವೈಟ್‌ಫೀಲ್ಡ್-ಕೋಲಾರ (52 ಕಿ.ಮೀ), ಗದಗ-ಹಾವೇರಿ (84 ಕಿ.ಮೀ) ಮತ್ತು ತುಮ ಕೂರು-ದಾವಣಗೆರೆ (210 ಕಿ.ಮೀ) ರೈಲ್ವೆ ಮಾರ್ಗಗಳ ನಿರ್ಮಾಣ ಕುರಿತು ಬಜೆಟ್‌ನಲ್ಲಿ ಘೋಷಿಸುವಂತೆ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಹೊಸ ರೈಲು ಮಾರ್ಗ ನಿರ್ಮಿಸಿದರೆ ರಾಜ್ಯ ಸರ್ಕಾರವೇ ಉಚಿತವಾಗಿ ಭೂಮಿ ಒದಗಿಸಲಿದೆ. ವೆಚ್ಚ ಹಂಚಿಕೆ, ಸರ್ಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಜಾರಿಗೂ ತಾವು ಬದ್ಧ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ವಾರ್ತೆ
Subscribe to:
Post Comments (Atom)
No comments:
Post a Comment