
ಜನತೆಯ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಶ್ರಮಿಸುತ್ತಿದ್ದು, ರಾಜ್ಯದಲ್ಲಿ ಭಯೋತ್ಪಾದಕ, ನಕ್ಸಲ್ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ. ಏತನ್ಮಧ್ಯೆ ಕರ್ನಾಟಕ-ತಮಿಳುನಾಡು ಮಧ್ಯೆ ಸೌಹಾರ್ದ ಯುಗ ಆರಂಭವಾಗಿರುವುದಾಗಿ ಗುರುವಾರ ಆರಂಭಗೊಂಡ ರಾಜ್ಯ ವಿಧಾನಮಂಡಲದ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಮಾತನಾಡಿದರು.
ಆರಂಭಿಕವಾಗಿ ರಾಜ್ಯಪಾಲರು ಕನ್ನಡದಲ್ಲಿ ಭಾಷಣ ಆರಂಭಿಸಿದ್ದರು.ರಾಜ್ಯದ ಸರ್ವಾಂಗೀಣ ಅಭಿವೃದ್ದಿಗೆ ಸರ್ಕಾರ ಮುತುವರ್ಜಿ ವಹಿಸಿರುವುದಾಗಿ ಹೇಳಿದರು. ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ ಶೈಕ್ಷಣಿಕವಾಗಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರುವುದಾಗಿ ತಿಳಿಸಿದರು.
ಪ್ರವಾಹದಿಂದಾಗಿ ಸುಮಾರು 18ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಆ ನಿಟ್ಟಿನಲ್ಲಿ ನೆರೆ ಪರಿಹಾರಕ್ಕೆ ಸರ್ಕಾರ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಲ್ಲದೇ, ನೆರೆ ಪರಿಹಾರಕ್ಕಾಗಿ ಕೇಂದ್ರದಿಂದ 1457ಕೋಟಿ ರೂ.ನೆರವು ಹರಿದು ಬಂದಿದೆ.
ರಾಜ್ಯಪಾಲರ ಭಾಷಣದ ಮುಖ್ಯಾಂಶಗಳು:
ರೈತರಿಗೆ ಅಗತ್ಯ ಸಹಕಾರವನ್ನು ರಾಜ್ಯ ಸರ್ಕಾರ ನೀಡುತ್ತಿದೆ.
ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ.
106ಲಕ್ಷ ಟನ್ ಆಹಾರ ಉತ್ಪಾದನೆ ನಿರೀಕ್ಷೆ.
ರಾಸಾಯನಿಕ ಗೊಬ್ಬರ ಬಳಕೆಯಲ್ಲಿ ಗಣನೀಯ ಇಳಿಕೆ.
ಹೈನೋದ್ಯಮ ಬಲವರ್ಧನೆಗೆ ಹೆಚ್ಚಿನ ಒತ್ತು.
ರೈತರಿಗಾಗಿ ಕರ್ನಾಟಕ ಕೃಷಿ ಮಿಷನ್ ಸ್ಥಾಪನೆ.
ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ಪೂರೈಕೆ.
ಪ್ರತಿನಿತ್ಯ 4.5ಲಕ್ಷ ಲೀಟರ್ ಹಾಲು ಉತ್ಪಾದನೆ.
ಶಾಂತಿ ಕದಡುವ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ.
ರೈತರ ಅಭಿವೃದ್ಧಿಗೆ ಹಲವು ಯೋಜನೆ.
ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಕ್ರಮ.
No comments:
Post a Comment