ಆಡಳಿತಾರೂಢ ಬಿಜೆಪಿ ಸರ್ಕಾರ ರಾಜ್ಯದ ರೈತರ ಮಾರಣ ಹೋಮ ನಡೆಸಲು ಮುಂದಾಗಿರುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮತ್ತೊಮ್ಮೆ ಸರ್ಕಾರದ ವಿರುದ್ಧ ಗುಡುಗಿದ್ದಾರೆ.
ಬುಧವಾರ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ರೈತ ವಿರೋಧಿ ಧೋರಣೆಯಿಂದಾಗಿ ರಾಜ್ಯದ 26ಜಿಲ್ಲೆಗಳಲ್ಲಿ ರೈತರ ಬದುಕಿಗೆ ಧಕ್ಕೆ ಉಂಟಾಗಿದೆ ಎಂದು ವಿವರಿಸಿದರು.
ಆ ನಿಟ್ಟಿನಲ್ಲಿ ಫೆಬ್ರುವರಿ 16ರಿಂದ 21ರವರೆಗೆ ರಾಜ್ಯಾದ್ಯಂತ ರೈತ ಜಾಗೃತಿ ಪ್ರವಾಸ ಕೈಗೊಳ್ಳುವುದಾಗಿ ಘೋಷಿಸಿದ ಅವರು, ಬೆಂಗಳೂರಿನಿಂದಲೇ ಪ್ರವಾಸಕ್ಕೆ ಚಾಲನೆ ನೀಡಲಾಗುವುದು ಎಂದರು. ಅಲ್ಲದೇ, ಫೆ.24ರಂದು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದರು.
ರೈತರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇವಲ ಕಣ್ಣೊರೆಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ ಹೊರತು, ರೈತರ ಪರವಾಗಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಈ ಸಂದರ್ಭದಲ್ಲಿ ದೂರಿದರು. ವಿವಿಧ ಯೋಜನೆಗಳಿಗೆ ರೈತರ ಭೂಮಿಯನ್ನೇ ವಶಪಡಿಸಿಕೊಳ್ಳವಲ್ಲಿ ಮುಂದಾಗಿರುವ ರಾಜ್ಯ ಸರ್ಕಾರ ರೈತರ ಬದುಕಿಗೆ ಕೊಳ್ಳಿ ಇಡಲು ಮುಂದಾಗಿದೆ ಎಂದು ಕಿಡಿಕಾರಿದರು. 
courtesy: webdunia
Feb 10, 2010
Subscribe to:
Post Comments (Atom)
No comments:
Post a Comment