VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Feb 22, 2010

ಬಿಜೆಪಿ ಡೋಂಗಿ ಸರ್ಕಾರ: ಸಿದ್ದರಾಮಯ್ಯ ಕಿಡಿ

ಆಡಳಿತಾರೂಢ ಬಿಜೆಪಿ ಸರ್ಕಾರದ ಸಚಿವರು, ಶಾಸಕರುಗಳು ಸುಳ್ಳು ಅಂಕಿ-ಅಂಶ ನೀಡುವ ಮೂಲಕ ಜನರ ಹಾದಿ ತಪ್ಪಿಸುತ್ತಿದ್ದಾರೆಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿಯದು ಕೇವಲ ಡೋಂಗಿ ಸರ್ಕಾರ ಎಂದು ಟೀಕಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣಕಾಸಿನ ವಿಷಯದ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವರು, ಶಾಸಕರು ಜನರಿಗೆ ಸುಳ್ಳು ಮಾಹಿತಿ ನೀಡಿ ಹಾದಿ ತಪ್ಪಿಸುತ್ತಿದ್ದಾರೆಂದು ದೂರಿದರು.

ಯಡಿಯೂರಪ್ಪನವರು ಹೇಳುವುದೊಂದು, ಮಾಡುವುದು ಇನ್ನೊಂದು. ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ತಡೆಯುತ್ತೇನೆಂದು ಹೇಳಿದವರು ಈಗ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ ಎಂದು ಹರಿಹಾಯ್ದರು.

ಚರ್ಚ್ ಮೇಲಿನ ದಾಳಿ ಕುರಿತಂತೆ ಸಲ್ಲಿಸಿದ ಸೋಮಶೇಖರ ಅವರ ವರದಿಯಲ್ಲಿನ ಆರ್.ಎಸ್.ಎಸ್., ಸಂಘಪರಿವಾರದ ಮೇಲಿನ ಆರೋಪಗಳನ್ನೇ ಅಲ್ಲಗಳೆದಿರುವ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಹೇಗೆ ರಕ್ಷಣೆ ಕೊಡಲು ಸಾಧ್ಯ ಎಂದು ಪ್ರಶ್ನಿಸಿದರು.

ಮೂಲ ಒಪ್ಪಂದದಂತೆ ನೈಸ್ ಯೋಜನೆ ನಡೆಯುತ್ತಿಲ್ಲ, ನೈಸ್ ವಿರೋಧಿ ಹೋರಾಟದಲ್ಲಿ ತೊಡಗಿರುವ ಜೆಡಿಎಸ್‌ಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ ಎಂದು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಕ್ರಪೆ - ವೆಬ್ ದುನಿಯಾ

No comments: