VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Feb 18, 2010

ಸಜ್ಜನ್ ವಿರುದ್ಧ ವಾರಂಟ್ ಜಾರಿ

1984ರ ಸಿಖ್ ಗಲಭೆಗೆ ಸಂಬಂಧಿಸಿದಂತೆ ಮಾಜಿ ಸಂಸದ ಮತ್ತು ಕಾಂಗ್ರೆಸ್ ಧುರೀಣ ಸಜ್ಜನ್ ಕುಮಾರ್ ಸೇರಿದಂತೆ ಏಳು ಜನರಿಗೆ ಅಡಿಷನ್ ಚೀಫ್ ಮೆಟ್ರೋಪಾಲಿಟಿನ್ ನ್ಯಾಯಾಲಯದ ನ್ಯಾಯಾಧೀಶರು ಜಾಮೀನುರಹಿತ ವಾರಂಟ್ ಹೊರಡಿಸಿದ್ದಾರೆ.

ನವದೆಹಲಿ (ಐಎಎನ್‌ಎಸ್): 1984ರ ಸಿಖ್ ಗಲಭೆಗೆ ಸಂಬಂಧಿಸಿದಂತೆ ಮಾಜಿ ಸಂಸದ ಮತ್ತು ಕಾಂಗ್ರೆಸ್ ಧುರೀಣ ಸಜ್ಜನ್ ಕುಮಾರ್ ಸೇರಿದಂತೆ ಏಳು ಜನರಿಗೆ ಅಡಿಷನ್ ಚೀಫ್ ಮೆಟ್ರೋಪಾಲಿಟಿನ್ ನ್ಯಾಯಾಲಯದ ನ್ಯಾಯಾಧೀಶರು ಜಾಮೀನುರಹಿತ ವಾರಂಟ್ ಹೊರಡಿಸಿದ್ದಾರೆ.

ಈ ತಿಂಗಳ 23ರಂದು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಸೂಚಿಸಿ ಆದೇಶ ಹೊರಡಿಸಲಾಗಿದ್ದು, ಎಲ್ಲ ಏಳು ಜನರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ತಿರಸ್ಕರಿಸಿದ್ದಾರೆ.

ಇಂದಿರಾ ಗಾಂಧಿ ಅವರ ಹತ್ಯೆಯ ನಂತರ ದೆಹಲಿಯಲ್ಲಿ ನಡೆದ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಸಜ್ಜನ್ ಕುಮಾರ್ ಮತ್ತು ಇತರರ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿತ್ತು.

ಇಂದು ವಿಚಾರಣೆ: ಸಜ್ಜನ್ ಕುಮಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ.

ವಿಚಾರಣಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿರುವುದನ್ನು ಪ್ರಶ್ನಿಸಿ ಸಜ್ಜನ್ ಕುಮಾರ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ವಾರ್ತೆ

No comments: