ಅಲ್ಪಸಂಖ್ಯಾತರ ಓಲೈಕೆ ಹಾಗೂ ಓಟ್‌ಬ್ಯಾಂಕ್‌ಗಾಗಿ ಪಶ್ಚಿಮ ಬಂಗಾಳದ ಕಮ್ಯುನಿಸ್ಟ್ ಪಕ್ಷದ ಸರ್ಕಾರ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿರುವುದು ದುರದೃಷ್ಟಕರ .
ಮಂಗಳೂರು: ಅಲ್ಪಸಂಖ್ಯಾತರಿಗೆ ಶೇ. 10ರಷ್ಟು ಮೀಸಲಾತಿ ನೀಡಿರುವ ಪಶ್ಚಿಮ ಬಂಗಾಳ ಸರ್ಕಾರದ ಕ್ರಮವನ್ನು ಖಂಡಿಸಿ ಬಜರಂಗ ದಳ ಜಿಲ್ಲಾ ಸಮಿತಿ ಹಾಗೂ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಜರಂಗ ದಳ ಪ್ರಮುಖ ಕೇಶವ ಹೆಗಡೆ ಮಾತನಾಡಿದರು.
ಅಲ್ಪಸಂಖ್ಯಾತರ ಓಲೈಕೆ ಹಾಗೂ ಓಟ್‌ಬ್ಯಾಂಕ್‌ಗಾಗಿ ಪಶ್ಚಿಮ ಬಂಗಾಳದ ಕಮ್ಯುನಿಸ್ಟ್ ಪಕ್ಷದ ಸರ್ಕಾರ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಿರುವುದು ದುರದೃಷ್ಟಕರ ಎಂದರು.
ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಮೀಸಲಾತಿ ನೀಡಿದ ಆಂಧ್ರ ಪ್ರದೇಶ ಸರ್ಕಾರದ ಕ್ರಮವನ್ನು ಸುಪ್ರೀಂಕೋರ್ಟ್ ಅಸಿಂಧುಗೊಳಿಸಿರುವ ಪ್ರಕರಣ ಎದುರಿಗೇ ಇದ್ದರೂ ಪಶ್ಚಿಮ ಬಂಗಾಳವೂ ಅದೇ ಕ್ರಮ ಅನುಸರಿಸಿರುವುದು ದುರುದ್ದೇಶಪೂರಿತ. ಕೇಂದ್ರ ಸರ್ಕಾರ ತಕ್ಷಣ ಮಧ್ಯೆ ಪ್ರವೇಶಿಸಿ ಈ ಮೀಸಲಾತಿ ರದ್ದುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಮೀಸಲಾತಿ ರದ್ದುಗೊಳಿಸುವಂತೆ ಕೋರಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಅವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ವಿ.ಪೊನ್ನುರಾಜ್ ಅವರಿಗೆ ಸಲ್ಲಿಸಲಾಯಿತು.
ಬಜರಂಗ ದಳ ಜಿಲ್ಲಾ ಸಂಚಾಲಕ ಶಿವಾನಂದ ಮೆಂಡನ್, ವಿಶ್ವ ಹಿಂದೂ ಪರಿಷತ್ ಮುಖಂಡ ಜಗದೀಶ್ ಶೇಣವ, ಕೃಷ್ಣಮೂರ್ತಿ, ಮನೋಹರ್, ರಾಜು ಕುಲಾಲ್ ಮತ್ತಿತರರು ಪ್ರತಿಭಟನೆಯಲ್ಲಿದ್ದರು.
ಪ್ರಜಾವಾಣಿ ವಾರ್ತೆ
Subscribe to:
Post Comments (Atom)
No comments:
Post a Comment