ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಅರ್ಧ ಸೋತಿದೆ. ಚುನಾವಣೆಯಲ್ಲಿ ಸಂಪೂರ್ಣವಾಗಿ ಸೋಲಲಿದೆ. ಜೆಡಿಎಸ್‌ಗೆ ಕೂಡ ಚುಣಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಪಕ್ಷ 120 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಬೆಂಗಳೂರು ಅಭಿವೃದ್ದಿಗೆ ಸರ್ಕಾರ ಕೈಗೊಂಡ ಯೋಜನೆಗಳೇ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪೂರಕವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದೆ ಎಂಬ ಆರೋಪವನ್ನು ತಳ್ಳಿ ಹಾಕಿದ ಈಶ್ವರಪ್ಪ, ಬಿಜೆಪಿ ಪಕ್ಷ ಯಾವುದೇ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲ. ಜೆಡಿಎಸ್ ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕೆಗೆ ಜಾಹೀರಾತು ಬಿಡುಗಡೆ ಮಾಡಿದೆ. ಹಾಗೆಯೇ, ಕಾಂಗ್ರೆಸ್ ಪಕ್ಷ ಕೂಡ ಕಾರ್ಯಕರ್ತರ ಸಭೆ ನಡೆಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದೆ. ಎರಡು ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ತಿಳಿಸಿದ್ದಾರೆ.
Subscribe to:
Post Comments (Atom)
No comments:
Post a Comment