
ನವದೆಹಲಿ .ಮಾರ್ಚ್ ೨೩: ಕೇಂದ್ರ ಸರ್ಕಾರದ ಉನ್ನತ ಶೈಕ್ಷಣಿಕ ನೀತಿಯನ್ನು ವಿರೋಧಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವಿಧ್ಯಾರ್ಥಿ ಸಂಘಟನೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದೆಹಲಿಯ ಜಂತರ್ ಮಂತರ್ ಬಳಿ ಬೃಹತ್ ಪ್ರತಿಭಟನೆ ನಡೆಸಿತು .
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಿಸುಜ್ಜಮಾನ್ ಹೇಗೆ ಕಾರ್ಪೋರೆಟ್ ದೊರೆಗಳು, ರಾಜಕಾರಣಿಗಳು ಮತ್ತು ಕೋಮುವಾದಿಗಳು ಶಿಕ್ಷಣ ಕ್ಷೇತ್ರದಲ್ಲಿ ಪ್ರವೇಶ ಮಾಡಿ ಸಾಮಾಜಿಕ ಶಿಕ್ಷಣ ಕ್ಷೇತ್ರವನ್ನು ದುರ್ಬಳಗೊಲಿಸುತ್ತಾರೆ ಎಂಬುವುದನ್ನು ಸವಿಸ್ತಾರವಾಗಿ ವಿವರಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಡೆಮೊಕ್ರಾಟಿಕ್ ಸ್ಟುಡೆಂಟ್ ಯೂನಿಯನ್ ಪ್ರತಿನಿಧಿ ಕುಮಾರಿ ಬನೋ ಜ್ಯೋತ್ಸ್ನಾ ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ನೀತಿ ಶೋಷಿತ ಸಮುದಾಯಗಳಿಗೆ ಮಾರಕವಾಗಿದ್ದು ಬಡವರು ಇದರಿಂದ ಉನ್ನತ ಶಿಕ್ಷಣ ವಂಚಿತರಾಗಲಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತರಲು ಉದ್ದೇಶಿಸಿ ಮಂಡಿಸಲಿರುವ ಎರಡು ಮಸೂದೆಗಳನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮೊಹಮ್ಮದ್ ಅಲ್ತಾಫ್ ಆಲಂ, ಅಧ್ಯಕ್ಷರು , ದೆಹಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿಧ್ಯಾರ್ಥಿಗಳನ್ನು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸರ್ಫಾರಾಜ್ ಅಹಮದ್ ಉಪಸ್ಥಿತರಿದ್ದರು. ಸಭೆಯ ಕೊನೆಯಲ್ಲಿ ಪ್ರಧಾನ ಮಂತ್ರಿಯವರ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ದೆಹಲಿಯ ಅನೇಕ ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
No comments:
Post a Comment