
ಮಂಗಳೂರು, ಮಾ.೧೫: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ೨೦೦೯ನೆ ಸಾಲಿನ ಪ.ಗೋ ಪ್ರಶಸ್ತಿಗೆ ಹರೀಶ್ ಕೆ. ಆದೂರು ಆಯ್ಕೆಯಾಗಿದ್ದಾರೆ.
೨೦೦೯ರ ಮೇ ೨೬ರಂದು ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ‘ಮಳೆ ಬಿದ್ದ ಮೇಲೆ ಹೊರಜಗತ್ತಿಗಿವರು ಅಜ್ಞಾತ’ ಗ್ರಾಮೀಣ ವರದಿಗೆ ಈ ಪ್ರಶಸ್ತಿ ಲಭಿಸಿದೆ.
ಮಾ.೨೧ರಂದು ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯ ಕನ್ನಡ ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಕಾರ್ಯದರ್ಶಿ ಜಯರಾಮರಾಜ ಅರಸ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಘದ ಪ್ರಕಟನೆ ತಿಳಿಸಿದೆ.
1 comment:
ಅಭಿನಂದನೆಗಳು
ಪ.ರಾಮಚಂದ್ರ
ರಾಸ್ ಲಫ್ಫಾನ್, ಕತಾರ್
Post a Comment