
ಬೆಂಗಳೂರು, ಮಾ. ೨೨: ಚರ್ಚ್ ಮತ್ತು ಮಸೀದಿಗಳ ಮೇಲಿನ ದಾಳಿ ತಡೆಯುವುದು ಎಲ್ಲ ಹಿಂದೂಗಳ ಕರ್ತವ್ಯ. ಅಂತೆಯೇ ಗೋವುಗಳ ಸಂರಕ್ಷಣೆ ಮುಸ್ಲಿಮರು ಮತ್ತು ಕ್ರೈಸ್ತರು ಸೇರಿದಂತೆ ಅಲ್ಪಸಂಖ್ಯಾತರ ಆದ್ಯ ಕರ್ತವ್ಯ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಸೋಮವಾರ ನಗರದ ಬಸವನಗುಡಿಯಲ್ಲಿ ಆಯೋಜಿಸಲಾಗಿದ್ದ ಗೋಹತ್ಯೆ ನಿಷೇಧ ಮಸೂದೆ ಅಂಗೀಕರಿಸಿದ ಅಭಿನಂದನಾ ಸಮಾರಂಭ ಪಾಲ್ಗೊಂಡು ಮಾತನಾಡಿದ ಅವರು, ಗೋ ಸಂರಕ್ಷಣೆ ಸರಕಾರದಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರು ಮತ್ತು ಅಲ್ಪಸಂಖ್ಯಾತರು ಸರಕಾರದೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ದೇಶದಲ್ಲಿಂದು ಗೋ ಸಂತಿತಿ ವಿನಾಶದ ಹಂತಕ್ಕೆ ಹೋಗುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ಗೋಹತ್ಯೆ ನಿಷೇಧ ಮಸೂದೆ ಜಾರಿಗೆ ತಂದಿರುವುದು ಸ್ವಾಗತಾರ್ಹ ಎಂದು ಶ್ಲಾಘನೆ ವ್ಯಕ್ತಪಡಿಸಿದ ಸ್ವಾಮೀಜಿ, ಗೋ ಸಂರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ ಎಂದು ಸಲಹೆ ಮಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಪಾಲ್ಗೊಂಡಿದ್ದರು
No comments:
Post a Comment