VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Mar 29, 2010

ಅಂಬೇಡ್ಕರ್ ಪ್ರತಿಮೆ ಭಗ್ನ: ಉದ್ವಿಗ್ನ ಸ್ಥಿತಿ ನಿರ್ಮಾಣ


ಬೆಂಗಳೂರು, ಮಾ. ೨೮: ಇಲ್ಲಿನ ಶಾಂತಿನಗರದ ನಂಜಪ್ಪ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಯನ್ನು ದುಷ್ಕರ್ಮಿಗಳು ಉರುಳಿದ್ದರಿಂದ ಆಕ್ರೋಶಗೊಂಡ ದಲಿತ ಸಂಘಟನೆಗಳ ಕಾರ್ಯಕರ್ತರು ಧರಣಿ ನಡೆಸಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಸಿಮೆಂಟ್‌ನಿಂದ ನಿರ್ಮಿಸಲಾಗಿದ್ದ ಅಂಬೇಡ್ಕರ್ ಪ್ರತಿಮೆಯನ್ನು ರವಿವಾರ ಬೆಳಗಿನಜಾವ ೪ಗಂಟೆಯ ಸುಮಾರಿಗೆ ಉರುಳಿಸಿ ದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳದಲ್ಲಿ ಜಮಾಯಿಸಿದ ದಲಿತ ಸಂಘಟನೆಗಳ ಕಾರ್ಯಕರ್ತರು ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ ಕಾರ್ಯಕರ್ತರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಘಟನೆಯ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಘಟನಾ ಸ್ಥಳಕ್ಕೆ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಚುನಾವಣೆಯ ಆಯುಕ್ತ ಭರತ್‌ಲಾಲ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಕ್ಷಣವೇ ಪ್ರತಿಮೆ ಪುನರ್ ಸ್ಥಾಪಿಸುವುದಾಗಿ ಭರವಸೆ ನೀಡಿದ್ದಾರೆ. ಪ್ರತಿಮೆ ಭಗ್ನ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಕಾರಗೃಹ ಶಿಕ್ಷೆ ವಿಧಿಸಬೇಕು ಎಂದು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ಧಾಪುರ ಠಾಣಾ ಪೊಲೀಸರು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಬಿ‌ಎಸ್ಪಿ ಖಂಡನೆ: ಶಾಂತಿನಗರ ವಾರ್ಡ್‌ನ ನಂಜಪ್ಪ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ ಮಾಡಿದ ಕೃತ್ಯವನ್ನು ಬಿ‌ಎಸ್ಪಿ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ತೀವ್ರವಾಗಿ ಖಂಡಿಸಿದ್ದಾರೆ.

ಸಂವಿಧಾನ ಶಿಲ್ಪಿಗೆ ಅವಮಾನ ಮಾಡಿದ ಆರೋಪಿಗಳನ್ನು ಬಂಧಿಸಬೇಕು. ಅದೇ ಸ್ಥಳದಲ್ಲಿ ಅಂಬೇಡ್ಕರ್ ಅವರ ಪಂಚ ಲೋಹದ ವಿಗ್ರಹ ಸ್ಥಾಪನೆ ಮಾಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರಕಾರ ಅಗತ್ಯ ಮುನ್ನಚ್ಚರಿಕೆ ಕೈಗೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಸರಕಾರವನ್ನು ಒತ್ತಾಯಿಸಿದ್ದಾರೆ.

No comments: