VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Mar 27, 2010

ನಾಳೆ ಬಿಬಿ‌ಎಂಪಿಗೆ ಚುನಾವಣೆ: ಘರ್ಷಣೆ, ಹಿಂಸಾಚಾರ, ಅಕ್ರಮಗಳ ಮೇಲುಗೈ

ಬೆಂಗಳೂರು, ಮಾ. ೨೬: ಬಿಬಿ‌ಎಂಪಿ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ, ಜಟಾಪಟಿ ನಡೆದು ಕನಿಷ್ಟ ೧೦ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆಗಳು ವರದಿಯಾಗಿವೆ.

ಇಲ್ಲಿನ ಹೇರೋಹಳ್ಳಿ, ಕೋಣೆನ‌ಅಗ್ರಹಾರ, ಬೈರಸಂದ್ರ, ನಂದಿನಿ ಲೇ‌ಔಟ್, ಶ್ರೀರಾಮಪುರ, ಬ್ಯಾಟರಾಯನಪುರ, ವಸಂತನಗರ, ಪದ್ಮಾನಾಭನಗರ, ಗಿರಿನಗರ, ಬಸವನಪುರ, ಹೊಸಕೆರೆಹಳ್ಳಿ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಕಾಂಗ್ರೆಸ್, ಜೆಡಿ‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ. ಇದರಲ್ಲಿ ಹಲವರು ಗಾಯಗೊಂಡಿದ್ದಾರೆ. ಅವರೆಲ್ಲ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಪುತ್ರ ಕಟ್ಟಾ ಜಗದೀಶ್ ಸ್ಪರ್ಧಿಸಿರುವ ವಸಂತನಗರ ವಾರ್ಡ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರನ್ನು ಬೆದರಿಸುತ್ತಿದ್ದಾರೆ ಎಂದು ಆರೋಪಿಸಿ ಎನ್‌ಎಸ್‌ಯು‌ಐನ ಕಾರ್ಯಕರ್ತರು ಚುನಾವಣಾ ಆಯೋಗದ ಮುಂದೆ ಪ್ರತಿಭಟನೆ ನಡೆಸಿದರು.

ಬ್ಯಾಟರಾನಪುರದಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಆರೋಪಿಸಿ ಜೆಡಿ‌ಎಸ್ ಕಾರ್ಯಕರ್ತರು ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಹೊರ ವಲಯದ ಹೇರೋಹಳ್ಳಿಯಲ್ಲಿ ಮದುವೆ ಕಾರ್ಡ್ ಹಂಚುತ್ತಿದ್ದವರನ್ನು ಹಣ ಹಂಚುತ್ತಿದ್ದಾರೆ ಎಂದು ತಪ್ಪಾಗಿ ಭಾವಿಸಿ ಇಬ್ಬರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ.

ಮಾರಕಾಸ್ತ್ರಗಳಿಂದ ಹಲ್ಲೆ: ಇಲ್ಲಿನ ಕೋಣೆನ ಅಗ್ರಹಾರದಲ್ಲಿ ಜೆಡಿ‌ಎಸ್ ಅಭ್ಯರ್ಥಿ ಕಾರ್ಯಕರ್ತರೊಂದಿಗೆ ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿಯ ಆರೇಳು ಮಂದಿ ಕಾಯಕರ್ತರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಈ ದಾಳಿಯಿಂದ ಇಬ್ಬರು ಜೆಡಿ‌ಎಸ್ ಕಾರ್ಯಕರ್ತರು ಗಂಭೀರವಾಗಿ ಗಾಯಗೊಂಡಿದ್ದು, ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದ ಓಕಲೀಪುರಂ ವಾರ್ಡ್‌ನಲ್ಲಿ ಮಂಗಳಮುಖಿ (ಹಿಜಡಾ) ಸಮುದಾಯದ ಪಕ್ಷೇತರ ಅಭ್ಯರ್ಥಿ ಣಾರ ಮೇಲೆ ಕಾಂಗ್ರೆಸ್ ಅಭ್ಯರ್ಥಿಯ ಪತಿ ಚಕ್ರವರ್ತಿ ಎಂಬವರು ಹಲ್ಲೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಕ್ಷಣೆ ನೀಡಲು ಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಗಿರಿನಗರ ಹಾಗೂ ಕತ್ರಿಗುಪ್ಪೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಸಚಿವ ಅಶೋಕ್ ಪ್ರಚಾರ ನಡೆಸುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಗೂಂಡಾಗಿರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆಸಿದರು.

೪ಲಕ್ಷ ರೂ.ಹಣ ವಶ: ಇಲ್ಲಿನ ರಾಜರಾಜೇಶ್ವರನಗರದ ಚನ್ನಸಂದ್ರದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಸುಮಾರು ೪ ಲಕ್ಷ ರೂ.ಅಕ್ರಮ ಹನವನ್ನು ಚುನಾವಣಾ ಆಯೋಗದ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ನಗರದ ವಿವಿಧ ಪ್ರದೇಶಗಳಲ್ಲಿ ಮತದಾರರಿಗೆ ಆಮಿಷವೊಡ್ಡಲು ಸಂಗ್ರಹಿಸಿದ್ದ ಹಣ, ಸೀರೆ ಸೇರಿದಂತೆ ಮತ್ತಿತರ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದು, ಈ ಸಂಬಂಧ ಅಭ್ಯರ್ಥಿಗಳು ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

No comments: