ಶಿವಮೊಗ್ಗ,ಮಾ.27: ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ದಿನನಿತ್ಯದ ಅಗತ್ಯ ವಸ್ತುಗಳ ಬೆಲೆಯನ್ನು ನಿಗ್ರಹಿಸುವಲ್ಲಿ ವಿಫಲವಾಗಿರುವುದನ್ನು ಖಂಡಿಸಿ ನಗರ ಹಾಗೂ ಗ್ರಾಮಾಂತರ ಬಿಜೆಪಿ ಮಹಿಳಾಮೋರ್ಚಾದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿದರು.
ದಿನನಿತ್ಯದ ಅಗತ್ಯ ವಸ್ತುಗಳಾದ ಬೇಳೆಕಾಳು, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಇನ್ನೂ ಅನೇಕ ದಿನಬಳಕೆ ವಸ್ತುಗಳ ಬೆಲೆ ದಿನೇ ದಿನೇ ಏರುತ್ತಿದ್ದರೂ ಸಹ ಇದನ್ನು ನಿಗ್ರಹಿಸುವಲ್ಲಿ ಕೇಂದ್ರದ ಯುಪಿಎ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಭೆಯಲ್ಲಿ ಮಾತನಾಡಿದ ಗ್ರಾಮಾಂತರ ಘಟಕದ ಅಧ್ಯಕ್ಷೆ ಪದ್ಮಿನಿ ಆರೋಪಿಸಿದರು.
ಬೆಲೆ ಏರಿಕೆಯಿಂದಾಗಿ ದಲಿತರು, ಕೃಷಿ ಕೂಲಿಕಾರ್ಮಿಕರು, ಜನಸಾಮಾನ್ಯರು ಜೀವನ ನಡೆಸುವುದೇ ಕಷ್ಟಕರವಾಗಿದೆ. ಆದ್ದರಿಂದ ಬೆಲೆ ಇಳಿಕೆಗೆ ಅಗತ್ಯ ಕ್ರಮಕೈಗೊಳ್ಳಬೇಕಾಗಿದೆ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯೆ ರೇಣುಕಾನಾಗರಾಜ್, ಸುಧಾಮಣಿಬೋರಯ್ಯ, ನಾಗರತ್ನಸೋಮಶೇಖರ್, ನಿರ್ಮಲಾ, ನಿರ್ಮಲಾಗಣೇಶ್ ಮುಂತಾದವರು ಉಪಸ್ಥಿತರಿದ್ದರು.
Subscribe to:
Post Comments (Atom)
No comments:
Post a Comment