VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Mar 12, 2010

ಸಚಿನ್ ವಿಶ್ವಸಂಸ್ಥೆ ರಾಯಭಾರಿ


ವಿಶ್ವಸಂಸ್ಥೆ, ಮಾ. 12 : ಅಂತಾರಾಷ್ಟ್ರೀಯ ಕ್ರಿಕೆಟ್ ರಂಗದ ಮೇರು ಆಟಗಾರ ಸಚಿನ್ ತೆಂಡೂಲ್ಕರ್ ಗೆ ಭಾರತರತ್ನ ಪ್ರಶಸ್ತಿ ನೀಡಬೇಕು ಎಂಬ ಕೂಗಿನ ಬೆನ್ನಲ್ಲೇ ವಿಶ್ವಸಂಸ್ಥೆಯು ತನ್ನ ಪರಿಸರ ಯೋಜನೆಗಳ ಕಾರ್ಯಕ್ರಮಗಳಿಗೆ ರಾಯಭಾರಿಯಾಗಿ ನೇಮಿಸಿದೆ.ಭಾರತೀಯ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ ನ ಏಕದಿನ ಮತ್ತು ಟೆಸ್ಟ್ ಪಂದ್ಯಗಳಲ್ಲಿ ದಾಖಲೆ ನಿರ್ಮಿಸಿದ್ದಾರೆ. ಅಲ್ಲದೇ, ಸಚಿನ್ ನನ್ನು ಭಾರತೀಯರಷ್ಟೇ ಅಲ್ಲ. ಜಗತ್ತಿನಾದ್ಯಂತ ಅಭಿಮಾನಿ ಬಳಗವನ್ನು ಹೊಂದಿದ್ದು, ಪರಿಸರಕ್ಕೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸಲು ಸಚಿನ್ ಸೂಕ್ತ ಎಂದು ತೀರ್ಮಾನಿಸಿ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮಗಳ ರಾಯಭಾರಿಯಾಗಿ ನೇಮಿಸಲಾಗಿದೆ.ಉತ್ತಮ ಕ್ರಿಕೆಟ್ ಆಡುವ ಮೂಲಕ ಜಗತ್ತಿನಾದ್ಯಂತ ಅಭಿಮಾನಿಗಳನ್ನು ಹೊಂದಿರುವ ನನ್ನನ್ನು ವಿಶ್ವಸಂಸ್ಥೆ ಗುರುತಿಸಿದೆ. ಕ್ರಿಕೆಟ್ ನಿಂದ ಸಾಕಷ್ಟು ಜನಪ್ರಿಯತೆಯನ್ನು ಗಳಿಸಿರುವೆ. ನನ್ನಿಂದ ಪರಿಸರ ಉಳಿಸಲು ಸಾಧ್ಯವಾಗುವುದಾದರೆ ನಾನು ವಿಶ್ವಸಂಸ್ಥೆ ಅಡಿಯಲ್ಲಿ ಕೆಲಸ ಮಾಡಲು ಸಿದ್ಧ ಎಂದು ಸಚಿನ್ ಹೇಳಿದ್ದಾರೆ.

No comments: