VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Mar 25, 2010

ನವದೆಹಲಿ: ಬಾಟ್ಲಾ ಹೌಸ್ ಎನ್ಕೌಂಟರ್ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸಿ.ಎಸ್. ಐ. ಓ ದಿಂದ ಪ್ರತಿಭಟನೆ.


ನವದೆಹಲಿ: ಮಾರ್ಚ್ ೨೫: ದೆಹಲಿ ಜಾಮಿಯಾ ನಗರದ ಬಾಟ್ಲಾ ಹೌಸ್ ನಲ್ಲಿ ನಡೆದ ಆಜಂಘಡದ ವಿಧ್ಯಾರ್ಥಿಗಳಾದ ಆತಿಫ್ ಮತ್ತು ಸಾಜಿದ್ ಎನ್ಕೌಂಟರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಒತ್ತಾಯಿಸಿ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾದ ನೇತೃತ್ವದಲ್ಲಿ ಹಲವಾರು ವಿಧ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಸ್.ಐ.ಓ. ರಾಷ್ಟ್ರೀಯ ಅಧ್ಯಕ್ಷ ಸುಹೈಲ್.ಕೆ.ಕೆ. ಭಯೋತ್ಪಾದನೆಯ ಹೆಸರಿನಲ್ಲಿ ಅಮಾಯಕ ಮುಸ್ಲಿಂ ಯುವಕರನ್ನು ಪೂರ್ವಾಗ್ರಹಪೀಡಿತರಾಗಿ ಭೇಟೆಯಾಡುವುದನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಬಾಟ್ಲಾ ಹೌಸ್ ಎನ್ಕೌಂಟರ್ ಪ್ರಕರಣವನ್ನು ಸುಪ್ರೀಂ ಕೋರ್ಟಿನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಹಾಗಾದಾಗ ಮಾತ್ರ ಸತ್ಯ ಹೊರಬರಲು ಸಾಧ್ಯ ಎಂದು ಹೇಳಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಹಿರಿಯ ಪತ್ರಕರ್ತ ಹಾಗೂ ಚಲನ ಚಿತ್ರ ನಿರ್ದೇಶಕ ಸತ್ಯ ಸಾಗರ್ ಬಾಟ್ಲಾ ಹೌಸ್ ನಂತಹ ಪ್ರಕರಣಗಳು ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿವೆ. ಎನ್ಕೌಂಟರ್ ಹೆಸರಿನಲ್ಲಿ ಅಮಾಯಕ ವಿಧ್ಯಾರ್ಥಿಗಳನ್ನು ಮತ್ತು ಯುವಕರನ್ನು ಕೊಲ್ಲಲಾಗುತ್ತಿದೆ. ಆದರೆ ಅದು ಮಾಧ್ಯಮಗಳಲ್ಲಿ ಬರದೆ ಹಾಗೆ ಪ್ರಕರಣ ಮುಚ್ಚಿ ಹೋಗುತ್ತದೆ ಎಂದು ಹೇಳಿದರು.
ಜಮಾತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಕಾರ್ಯದರ್ಶಿ ಮುಜ್ತಬಾ ಫಾರೂಕ್ , ಮುಸ್ಲಿಂ ಪೊಲಿಟಿಕಲ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಡಾ: ತಸ್ಲೀಮ್ ರಹಮಾನಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು. ಬಾಟ್ಲಾ ಹೌಸ್ ಎನ್ಕೌಂಟರ್ ಪ್ರಕರಣದಲ್ಲಿ ಮೃತಪಟ್ಟ ಆತಿಫ್ ಮತ್ತು ಸಾಜಿದ್ ರವರ ಮರಣೋತ್ತರ ಪರೀಕ್ಷಾ ವರದಿ ಬಹಿರಂಗ ಗೊಂಡ ನಂತರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಈಗಾಗಲೇ ಹಲವು ಸಂಘಟನೆಗಳು ಒತ್ತಾಯಪಡಿಸತೊಡಗಿವೆ.

No comments: