ನವದೆಹಲಿ: ಮುಸ್ಲಿಂ ಮೀಸಲಾತಿಗಾಗಿ ಒತ್ತಾಯಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಾವಿರಾರು ಕಾರ್ಯಕರ್ತರು ಪಾರ್ಲಿಮೆಂಟ್ ಮಾರ್ಚ್ ನಡೆಸಿದರು. ಜಂತರ್ ಮಂತರ್ ನಲ್ಲಿ ಸೇರಿದ ಸಭೆಯನ್ನುದ್ದೇಶಿಸಿ ಮಾತನಾಡಿದ ಸೋಶಿಯಲ್ ಡೆಮೊಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಇ. ಅಬೂಬಕರ್ ಕೇಂದ್ರ ಸರ್ಕಾರ ಕೂಡಲೇ ರಂಗನಾಥ ಮಿಶ್ರ ವರದಿ ಜಾರಿಗೆ ತರಬೇಕೆಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಆಂಧ್ರ, ಕರ್ನಾಟಕ, ಕೇರಳ , ಮಹಾರಾಷ್ಟ್ರ, ತಮಿಳುನಾಡು, ಅಸ್ಸಾಂ, ಮಣಿಪುರ, ಪಶ್ಚಿಮ ಬಂಗಾಳದ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಪಿ.ಎಫ್.ಐ .ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಶರೀಫ್ ಪ್ರಧಾನ ಮಂತ್ರಿಯವರಿಗೆ ಮನವಿ ಸಲ್ಲಿಸಿದರು.
No comments:
Post a Comment