ಬೈಕ್‌ನಲ್ಲಿ ಸ್ಫೋಟಕ ಸಾಗಿಸುತ್ತಿದ್ದ ವೇಳೆ ಏಕಾಏಕಿ ಸ್ಫೋಟಗೊಂಡ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ಮಾಗಡಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
ತಾವರೆಕೆರೆಯಿಂದ ಮಾಗಡಿಯತ್ತ ಬೈಕ್‌ನಲ್ಲಿ ಸ್ಫೋಟಕವನ್ನು ಸಾಗಿಸುತ್ತಿದ್ದ ವೇಳೆ ಈ ದುರ್ಮರಣ ಸಂಭವಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಸಾವನ್ನಪ್ಪಿದವರು ತಮಿಳುನಾಡು ಮೂಲದವರು ಎನ್ನಲಾಗಿದೆ. ಬಂಡೆಕಲ್ಲು ಒಡೆಯಲು ಜಿಲೆಟಿನ್ ಕಡ್ಡಿ ಸಾಗಿಸುತ್ತಿದ್ದ ವೇಳೆ ಈ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಆದರೆ ಇದು ಸ್ಫೋಟಕವೇ ಅಥವಾ ಜಿಲೆಟಿನ್ ಕಡ್ಡಿಯೇ ಎಂಬುದು ಇನ್ನಷ್ಟೇ ತನಿಖೆಯಿಂದ ತಿಳಿಯಬೇಕಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಸಾವನ್ನಪ್ಪಿದವರು ತಮಿಳುನಾಡಿನವರೆಂದು ಗುರುತಿಸಲಾಗಿದೆ. ಆದರೆ ಇವರು ಸಾಗಿಸುತ್ತಿದ್ದ ಸ್ಫೋಟಕಕ್ಕೆ ಪರವಾನಿಗೆ ಇದೆಯೇ, ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Subscribe to:
Post Comments (Atom)
No comments:
Post a Comment