VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Mar 18, 2010

ಬೆಂಗಳೂರು:ಕೆಲಸಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ: ಚುನಾವಣಾಧಿಕಾರಿ


ಬೆಂಗಳೂರು, ಮಾ.೧೭: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ೬೬೧೦ ಮತಗಟ್ಟೆಗಳಿಗೆ ನೇಮಕ ಮಾಡಲಾದ ೪೫,೦೪೦ ಸಿಬ್ಬಂದಿ ವರ್ಗದವರಿಗೆ ವಿವಿಧ ತರಬೇತಿ ಶಿಬಿರಗಳಲ್ಲಿ ತರಬೇತಿ ನೀಡುವ ಕಾರ್ಯವನ್ನು ಮಾ.೨೧ ಹಾಗೂ ೨೫ರಂದು ಹಮ್ಮಿಕೊಳ್ಳಲಾಗಿದೆ.

ಚುನಾವಣಾ ಕಾರ್ಯಕ್ಕೆ ನೇಮಕವಾದ ಅಧಿಕಾರಿ/ಸಿಬ್ಬಂದಿ ವರ್ಗದವರು ನೇಮಕ ಮಾಡಿದ ಸ್ಥಳದಲ್ಲಿ ವರದಿ ಮಾಡಿಕೊಳ್ಳದೇ ನೆಮಕಾತಿ ರದ್ದುಪಡಿಸಿಕೊಳ್ಳಲು ಹಾಗೂ ಬೇರೆ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ಪ್ರಯತ್ನಿಸುವುದಾಗಲಿ, ಪ್ರಭಾವ ಬೀರುವುದಾಗಲಿ ಮಾಡಿದಲ್ಲಿ, ಅಂತಹ ಮತಗಟ್ಟೆ ಅಧಿಕಾರಿ/ಸಿಬ್ಬಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಅಲ್ಲದೆ, ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಲಾಗುವುದು ಎಂದು ಅಪರ ಆಯುಕ್ತರು(ಆಡಳಿತ) ಹಾಗೂ ಜಿಲ್ಲಾ ಚುನಾವಣಾಧಿಕಾರಿ(ಕೇಂದ್ರ) ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಆದ್ದರಿಂದ, ಚುನಾವಣೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಇದನ್ನು ಗಂಭೀರವಾಗಿ ಪರಿಗಣಿಸಿ ನಿಗದಿಪಡಿಸಿದ ದಿನಾಂಕದಂದು ತರಬೇತಿ ಹಾಗೂ ಚುನಾವಣಾ ಕೆಲಸಕ್ಕೆ ತಪ್ಪದೇ ಹಾಜರಾಗಲು ಹಾಗೂ ಅನಿವಾರ್ಯ ಮತ್ತು ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಅವರು ತಿಳಿಸಿದ್ದಾರೆ.

No comments: