
ಮಂಡ್ಯ, ಮಾ.೧೭: ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಮುನ್ನೆಚ್ಚರಿಕೆ ವಹಿಸಿ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಂ.ಕೆ. ಶಂಕರಲಿಂಗೇ ಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಳವಳ್ಳಿ ನೀರಿನ ಸಮಸ್ಯೆ ತಲೆದೋರಬಹುದಾದ ಗ್ರಾಮಗಳನ್ನು ಗುರುತಿಸಿ ಸಮರ್ಪ ಕವಾಗಿ ನೀರು ಸರಬರಾಜು ಮಾಡಲು ವ್ಯವಸ್ಥೆ ಮಾಡಬೇಕು ಎಂದು ಆದೇಶಿಸಿದರು.
ಮಳವಳ್ಳಿ ತಾಲೂಕಿನ ಬಿ.ಜಿ.ಪುರ, ನಾಗಮಂಗಲ ತಾಲೂಕಿನ ಕಾಂತಾ ಪುರ, ಕೆ.ಆರ್.ಪೇಟೆ ತಾಲೂಕಿನ ೨೦ ಗ್ರಾಮಗಳು ಸೇರಿದಂತೆ ಜಿಲ್ಲೆಯಲ್ಲಿ ಇನ್ನೂ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದು ರಾಗಲಿದೆ ಎಂದು ಅವರು ಹೇಳಿದರು.
ನೀರಿನ ಸಮಸ್ಯೆಯುಳ್ಳ ಪ್ರದೇಶಗಳನ್ನು ಗುರುತಿಸಿ ನದಿಯ ಮೂಲ ಗಳಿಂದ ನೀರಿನ ಸಂಪರ್ಕ ಕಲ್ಪಿಸಿ, ಶಾಶ್ವತ ಪರಿಹಾರ ಹುಡುಕಬೇಕು ಎಂದ ಅವರು, ಒಟ್ಟಾರೆ ಜಿಲ್ಲೆಯಲ್ಲಿ ಬೇಸಗೆ ವೇಳೆ ಜನ-ಜಾನುವಾರುಗಳಿಗೆ ಕುಡಿ ಯುವ ನೀರಿನ ಸಮಸ್ಯೆ ಎದುರಾಗಬಾರದೆಂದರು.
ಜಿಲ್ಲೆಯಲ್ಲಿ ಹೆಚ್ಚಿನ ಜಾತ್ರಾ ಮಹೋತ್ಸವಗಳು ನಡೆಯುತ್ತಿವೆ. ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ಹಾಗೂ ಈ ಸಂದರ್ಭದಲ್ಲಿ ಸಾರ್ವಜ ನಿಕರಿಗೆ ಶುದ್ಧ ನೀರು ಸೇವಿಸುವಂತೆ ಸಲಹೆ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಉದ್ದೇಶಿತ ಮೈಸೂರು-ಬೆಂಗಳೂರು ಜೋಡಿ ರೈಲ್ವೆ ಮಾರ್ಗಕ್ಕೆ ಅಗತ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಿ ಕೊಳ್ಳುವುದು ಸೇರಿದಂತೆ ಇನ್ನು ಹಲವಾರು ವಿಷಯಗಳ ಕುರಿತು ಶಂಕರಲಿಂಗೇಗೌಡರು ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು.
ಪ್ರಭಾರ ಜಿಲ್ಲಾಧಿಕಾರಿ ಪುಟ್ಟ ಮಾದಯ್ಯ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಲ್. ರಬೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.
No comments:
Post a Comment