ಬಿಬಿಎಂಪಿ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ಹುಮ್ಮಸ್ಸಿನ ಬೆನ್ನಲ್ಲೇ, ಮೇ 15 ರೊಳಗೆ ಗ್ರಾಮ ಪಂಚಾಯತ್ ಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಮಂಗಳವಾರ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಕುಮಾರಪಟ್ಟಣಂ ಹೆಲಿಪ್ಯಾಡ್‌ನಲ್ಲಿ ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಹೆಚ್ಚುವರಿ ವಿದ್ಯುತ್ ಖರೀದಿಗೆ ಸರ್ಕಾರ ಪ್ರಯತ್ನಿಸುತ್ತಿದ್ದು, ಸರ್ಕಾರದ ಆಡಳಿತಾವಧಿಯ ಐದು ವರ್ಷದ ಕೊನೆಯ ವೇಳೆಗೆ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇಲ್ಲದಂತೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಅಧಿಕಾರ ವಿಕೇಂದ್ರೀಕರಣದ ನಂತರ ರಾಜ್ಯ ಸರ್ಕಾರ ಗ್ರಾಮೀಣ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದೆ. ಕಳೆದ 22ತಿಂಗಳ ಬಿಜೆಪಿ ಕಾರ್ಯಸಾಧನೆಗೆ ಮೆಚ್ಚಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬೆಂಗಳೂರು ಜನತೆ ಆಶೀರ್ವದಿಸಿದ್ದಾರೆ ಎಂದರು.
Apr 6, 2010
Subscribe to:
Post Comments (Atom)
No comments:
Post a Comment