
ನವದೆಹಲಿ : ಏಪ್ರಿಲ್ ೧೩ : ಮಹಿಳಾ ಮೀಸಲಾತಿಯಲ್ಲಿ ಮುಸ್ಲಿಂ ಮತ್ತು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಒಳ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಮುಸ್ಲಿಂ ಮಹಿಳಾ ಸಂಘಟನೆಗಳು ದೇಶವ್ಯಾಪಿ ಸಹಿ ಸಂಗ್ರಹಣಾ ಚಳುವಳಿಗೆ ಚಾಲನೆ ನೀಡಿದವು.
ಮಹಿಳಾ ಮೀಸಲಾತಿಯಿಂದ ಮುಸ್ಲಿಂ , ದಲಿತ ಮತ್ತು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಯಾವುದೇ ರೀತಿಯ ಅನುಕೂಲವಿಲ್ಲ. ಆದ್ದರಿಂದ ಇದರಲ್ಲಿ ಪರಿಷ್ಕರಣೆ ಮಾಡಿ ಈ ಸಮುದಾಯಗಳಿಗೆ ಒಳ ಮೀಸಲಾತಿ ನೀಡಬೇಕೆಂಬ ಉದ್ದೇಶದಿಂದ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
No comments:
Post a Comment