ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಗದ್ದುಗೆ ಏರಿದ್ದು, ಕಾಂಗ್ರೆಸ್ ಹಿಡಿತದಲ್ಲಿದ್ದ ಕ್ಷೇತ್ರಗಳಲ್ಲಿಯೂ ಬಿಜೆಪಿ ತನ್ನ ಪ್ರಾಬಲ್ಯ ಮೆರೆದಿರುವುದು ಸ್ಪಷ್ಟವಾಗಿದೆ.
ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 9 ವಾರ್ಡ್‌ಗಳಲ್ಲಿ ಪೈಕಿ 8ರಲ್ಲಿ ಬಿಜೆಪಿ ಜಯಗಳಿಸಿದ್ದರೆ, ಜೆಡಿಎಸ್ ಒಂದು ಸ್ಥಾನಗಳಿಸಿದು, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿದ್ದರೂ, ಒಂದು ಸ್ಥಾನ ದೊರಕದಿರುವುದು ತೀವ್ರ ಮುಖಭಂಗಕ್ಕೆ ಈಡುಮಾಡಿದೆ.
ಇನ್ನು ವಿಜಯನಗರ ವಿಧಾನಸಭಾ ಕ್ಷೇತ್ರದ 8 ವಾರ್ಡ್‌ಗಳ ಪೈಕಿ 6ರಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಇಲ್ಲಿ ಕಾಂಗ್ರೆಸ್ ಪಕ್ಷದ ಆರ್.ಎಂ. ಕೃಷ್ಣಪ್ಪ ಅವರು ಶಾಸಕರು. ಆದರೂ ಪಕ್ಷಕ್ಕೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಅದೇ ರೀತಿ ಬೊಮ್ಮನ ಹಳ್ಳಿ ವಿಧಾನಸಭಾ ಕ್ಷೇತ್ರದ ಎಲ್ಲಾ ಎಂಟು ವಾರ್ಡ್‌ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದು ಬಂದಿದೆ. ಇಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಖಾತೆ ತೆರೆಯಲು ಆಗಲಿಲ್ಲ.
ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಬೈರೇಗೌಡ ಪ್ರತಿನಿಧಿಸಿದ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದ್ದು ಕೇವಲ ಒಂದು ವಾರ್ಡ್. ಆದರೆ ಸಚಿವ ಅರವಿಂದ ಲಿಂಬಾವಳಿ ಪ್ರತಿನಿಧಿಸಿ ಮಹದೇವಪುರ ಕ್ಷೇತ್ರದ 8 ವಾರ್ಡ್‌ಗಳಲ್ಲಿ 7ರಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಬಿಜೆಪಿ ಕೇವಲ ಒಂದು ಸ್ಥಾನ ಗಳಿಸಲು ಶಕ್ತವಾಗಿದೆ.
Subscribe to:
Post Comments (Atom)
No comments:
Post a Comment