VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Apr 6, 2010

ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ: ಯಡಿಯೂರಪ್ಪ

ರಾಜ್ಯದ ವಿದ್ಯುತ್ ಪರಿಸ್ಥಿತಿ ಸುಧಾರಿಸಲು ಸರ್ಕಾರ ಬದ್ಧವಾಗಿದ್ದು, ವಿದ್ಯುತ್ ಖರೀದಿಸಿಯಾದರೂ ಸಮರ್ಪಕ ವಿದ್ಯುತ್ ಸರಬರಾಜಿಗೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಕೊರತೆಯನ್ನು ನೀಗಿಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಇನ್ನೆರಡು ದಿನಗಳಲ್ಲಿ ವಿದ್ಯುತ್ ಸಮಸ್ಯೆಗೆ ಪರಿಹಾರ ದೊರಕಿಸುವುದಾಗಿ ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಉತ್ಪಾದಿಸುವ ವಿದ್ಯುತ್ ಹೊರ ರಾಜ್ಯಗಳಿಗೆ ಹೋಗುವುದನ್ನು ನಿರ್ಬಂಧಿಸಲು ಸದ್ಯದಲ್ಲೇ ಸಚಿವ ಸಂಪುಟದಲ್ಲಿ ಚರ್ಚಿಸಿ ಕಾಯಿದೆ ರೂಪಿಸುವುದಾಗಿ ಹೇಳಿದರು.

ಅಧಿಕಾರ ಶಾಶ್ವತ ಅಲ್ಲ. ಈ ಹಿಂದೆ ವಿರೋಧ ಪಕ್ಷಗಳು ಅಧಿಕಾರ ಪಡೆದಿತ್ತು. ಹಾಗಾಗಿ ಅನಗತ್ಯ ಆರೋಪ ಮಾಡುವುದು ಸರಿಯಲ್ಲ ಎಂದ ಅವರು, ಬಿಬಿಎಂಪಿ ಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪನ್ನು ಒಪ್ಪಿಕೊಂಡು ವಿಪಕ್ಷಗಳು ಅಭಿವೃದ್ದಿಗೆ ಸಹಕರಿಸಲಿ ಎಂದು ಅವರು ಸಲಹೆ ನೀಡಿದರು.

ಅಲ್ಲದೆ, ನೈಸ್ ವಿಚಾರವನ್ನು ದೆಹಲಿವರೆಗೂ ಕೊಂಡೊಯ್ದು ಬೀದಿರಂಪ ಮಾಡಿದ್ದು ಸರಿಯಲ್ಲ. ಇನ್ನು ಮುಂದಾದರೂ ವಿರೋಧ ಪಕ್ಷಗಳು ಅಭಿವೃದ್ದಿಗೆ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸವನ್ನು ಅವರು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

No comments: