VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Apr 6, 2010

ಸ್ವಾಸ್ಥ್ಯ ವಿಮಾ ಯೋಜನೆ ರಾಜ್ಯದೆಲ್ಲೆಡೆ ವಿಸ್ತರಣೆ: ಖರ್ಗೆ

ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ ಪ್ರಸಕ್ತ ರಾಜ್ಯದ 5 ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿದ್ದು, ಈ ಯೋಜನೆಯನ್ನು ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯೋಜನೆಗೆ ಕೇಂದ್ರ ಸರ್ಕಾರ ಶೇ. 75 ರಷ್ಟು ಹಣ ಒದಗಿಸಬೇಕಾಗಿದೆ. ಯೋಜನೆ ಅನುಷ್ಠಾನ ಹಾಗೂ ಯಶಸ್ವಿಗೆ ರಾಜ್ಯ ಸರ್ಕಾರ ಸಹಕಾರ ಅಗತ್ಯ. ಅದರಂತೆ ಯೋಜನೆಯನ್ನು ಇತರ ಜಿಲ್ಲೆಗೂ ವಿಸ್ತರಿಸಲಾಗುವುದು ಎಂದರು.

ಅಲ್ಲದೆ, ಕಾರ್ಮಿಕರ ಕಲ್ಯಾಣ ಕಾಯ್ದೆ ತಿದ್ದುಪಡಿ ಮಾಡಿ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆಯಲಾಗಿದ್ದು, ಈ ಕಾಯ್ದೆಗೆ ಲೋಕಸಭೆಯಲ್ಲಿ ಅನುಮೋದನೆ ಪಡೆಯಬೇಕಿದೆ. ಈ ಕಾಯ್ದೆ ತಿದ್ದುಪಡಿಯಿಂದ ಕಾರ್ಮಿಕರಿಗೆ ಆರೋಗ್ಯ ವಿಮೆ, ಕನಿಷ್ಠ ವೇತನ ಕುಟುಂಬಗಳಿಗೆ ಆರೋಗ್ಯ ಸವಲತ್ತು ದೊರೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಯೋಜನೆಗಳನ್ನು ತಮ್ಮ ಯೋಜನೆ ಎಂದು ರಾಜ್ಯ ಸರ್ಕಾರ ಬಿಂಬಿಸುತ್ತಿದೆ ಎಂದು ಟೀಕಿಸಿದ ಖರ್ಗೆ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಸ್ತೆ ಅಭಿವೃದ್ದಿ ಮಾಡುವಲ್ಲಿ ಬಿಜೆಪಿ ಶಾಸಕರು ತಮ್ಮ ಕ್ಷೇತ್ರಗಳಿಗೆ ಆದ್ಯತೆ ನೀಡಿ ಉಳಿದ ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ದೂರಿದ್ದಾರೆ.

No comments: