VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

Apr 7, 2010

ಮೈಸೂರು; ಬಿಜೆಪಿ ಗೆಲುವಿನ ನಾಗಾಲೋಟ ಗ್ರಾ.ಪಂ ಚುನಾವಣೆಯಲ್ಲೂ ಮುಂದುವರಿಯಲಿದೆ: ಸಿ‌ಎಂ


ಮೈಸೂರು,ಎ.೬: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆರಂಭವಾಗಿರುವ ಬಿಜೆಪಿ ಜಯದ ನಾಗಾಲೋಟ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಕಾಲೇಜಿನ ಒಳಾಂಗಣದಲ್ಲಿ ಇಂದು ಏರ್ಪಡಿಸಿದ್ದ ಗ್ರಾಮ ಪಂಚಾಯತ್ ಚುನಾವಣೆ ಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಕೇವಲ ಮಾತನಾಡುವುದೇ ಸಾಧನೆಯಲ್ಲ. ಸತತ ೨೨ ತಿಂಗಳು ಬಿಜೆಪಿ ಸರಕಾರ ಅಭಿವೃದ್ಧಿ ಮಂತ್ರ ಜಪಿಸಿದರ ಫಲ ಈಗ ಬಿಬಿ‌ಎಂಪಿ ಚುನಾವಣೆಯಲ್ಲಿ ಗೆಲುವು ದಕ್ಕಿಸಿಕೊಟ್ಟಿದೆ. ಹಾಗೆಯೇ ಬರಿ ಮಾತನಾಡುತ್ತಲೇ ಇರುವ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಪಕ್ಷಗಳನ್ನು ಜನತೆ ಈ ಚುನಾವಣೆಯಲ್ಲಿ ಧೂಳೀಪಟ ಮಾಡಿದ್ದಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ , ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ ಮಾತ ನಾಡಿದರು. ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಪಿ.ಎಂ ನರೇಂದ್ರಸ್ವಾಮಿ, ಶಾಸಕರಾದ ರಾಮ್‌ದಾಸ, ಜಿ.ಎನ್. ನಂಜುಂಡ ಸ್ವಾಮಿ, ಸಿ.ಟಿ.ರವಿ, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಜಿ.ಟಿ ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಸಿದ್ದರಾಜು, ತೋಂಟದಾರ್ಯ, ಪ್ರೊ.ಕೆ.ಆರ್ ಮಲ್ಲಿಕಾರ್ಜುನಪ್ಪ, ಗೋ. ಮಧುಸೂದನ್, ಮಾಜಿ ಸಂಸದ ಸಿ.ಎಚ್.ವಿಜಯಶಂಕರ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ ಮಂಜುನಾಥ ಹಾಗೂ ಇತರರು ಹಾಜರಿದ್ದರು.

ಹಾಲಿನ ದರ ಏರಿಕೆ: ಯಡಿಯೂರಪ್ಪ

ಮೈಸೂರು: ಬಿಬಿ‌ಎಂಪಿ ಚುನಾವಣೆಯಲ್ಲಿ ಗೆಲವು ದೊರಕಿಸಿದ ಜನತೆಗೆ ಹಾಲಿನ ದರ ಏರಿಕೆಯ ಕೊಡುಗೆ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ.

ನಗರದಲ್ಲಿ ಇಂದು ಏರ್ಪಡಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿ, ಹಾಲಿನ ದರವನ್ನು ಸ್ವಲ್ಪ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಆ ಹೆಚ್ಚುವರಿ ಹಣವನ್ನು ರೈತರಿಗೆ ಪಾವತಿಸುವುದಾಗಿ ಹೇಳಿದರು.

No comments: