VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 29, 2010

ರಾಜ್ಯದಲ್ಲಿ 104 ಸುಸಜ್ಜಿತ ಮೊಬೈಲ್ ಸೇವಾ ಆಸ್ಪತ್ರೆ: ಶ್ರೀರಾಮುಲು

ಬೆಂಗಳೂರು, ಮೇ 28: ಎಲ್ಲ ರೀತಿಯ ಆರೋಗ್ಯ ಸೇವೆ ಕಲ್ಪಿಸುವ ಸರ್ವಾಂಗೀಣ ವ್ಯವಸ್ಥೆ ಹೊಂದಿರುವ 104 ಮೊಬೈಲ್ ಆಸ್ಪತ್ರೆಗಳನ್ನು ಆರಂಭಿ ಸಲು ನಿರ್ಧರಿಸಿದ್ದು, ಇದರ ಸೇವೆ ಅಕ್ಟೋಬರ್ 2ರಿಂದ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ.

ವಿಧಾನಸೌಧದಲ್ಲಿರುವ ತನ್ನ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಸಜ್ಜಿತ ಮೊಬೈಲ್ ಆಸ್ಪತ್ರೆ ಸೇವೆಯು 108 ಆರೋಗ್ಯ ಸೇವೆ ಮಾದರಿಯಲ್ಲೆ ಎಲ್ಲ ರೀತಿಯ ವ್ಯವಸ್ಥೆ ಹೊಂದಿರುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಮೊಬೈಲ್ ಆಸ್ಪತ್ರೆ ಸೇವಾ ವ್ಯವಸ್ಥೆ ಕಲ್ಪಿಸುವ ಅನಿವಾರ್ಯತೆ ಹಿಂದೆಂದಿಗಿಂತಲೂ ಇಂದು ಅಗತ್ಯ ವಾಗಿದೆ. ಈ ಆಸ್ಪತೆಯಲ್ಲಿ ಪರೀಕ್ಷಾ ಘಟಕ ಸೇರಿದಂತೆ ತುರ್ತು ಆರೋಗ್ಯ ಸೇವೆಗೆ ಅವಶ್ಯಕತೆ ಇರುವ ಎಲ್ಲ ವ್ಯವಸ್ಥೆಗಳನ್ನು ಹೊಂದಿರುತ್ತದೆ ಎಂದು ಅವರು ವಿವರಿಸಿದರು.

ಗುಜರಾತ್ ರಾಜ್ಯದಲ್ಲಿ ಮೊಬೈಲ್ ಆಸ್ಪತ್ರೆ ಸೇವೆ ಈಗಾಗಲೇ ಜಾರಿ ಯಲ್ಲಿದೆ. ರಾಜ್ಯದಲ್ಲೂ ಈ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಈಗಾಗಲೆ ಚರ್ಚೆ ನಡೆಸಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ಮೊಬೈಲ್ ಆಸ್ಪತ್ರೆ ವ್ಯವಸ್ಥೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.

ಸಾಂಕ್ರಾಮಿಕ ರೋಗ ತಡೆಗಟ್ಟಲು ಕ್ರಮ: ರಾಜ್ಯಾದ್ಯಂತ ಒಟ್ಟು 6700 ಮಲೇರಿಯಾ, 83 ಡೆಂಗ್ಯೂ, 1017 ಚಿಕೂನ್ ಗುನ್ಯಾ, 3880 ಕರಳು ಬೇನೆ ಪ್ರಕರಣಗಳು ವರದಿಯಾಗಿವೆ. ಆದರೆ ಯಾವುದೆ ವ್ಯಕ್ತಿ ಸಾವಿಗೀಡಾಗಿಲ್ಲ ಎಂದು ಅವರು ತಿಳಿಸಿದರು. ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಸಲುವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಪ್ರತಿ ಜಿಲ್ಲೆಗೆ ತಲಾ 50 ಸಾವಿರ ರೂ. ಬಿಡುಗಡೆ ಮಾಡಲಾಗಿದೆ. ಹ್ಯಾಲೋಜಿನ್ ಮಾತ್ರೆಗಳನ್ನು ಪೂರೈಕೆ ಮಾಡಲಾಗಿದೆ ಎಂದು ಅವರು ಹೇಳಿದರು.

ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ: ಇಲಾಖೆಯಲ್ಲಿ ಒಟ್ಟು 18000 ಹುದ್ದೆಗಳು ಖಾಲಿ ಇವೆ. ಇದರಲ್ಲಿ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇನ್ನೊಂದು ತಿಂಗಳಲ್ಲಿ 500ಕ್ಕೂ ಅಧಿಕ ವೈದ್ಯರ ನೇಮಕಾತಿ ಆದೇಶ ಪ್ರಕಟಿಸ ಲಾಗುವುದು ಎಂದು ಶ್ರೀರಾಮುಲು ತಿಳಿಸಿದರು.

ಭ್ರೂಣ ಹತ್ಯೆ ತಡೆ, ಭಾಗ್ಯಲಕ್ಷ್ಮಿ ಯೋಜನೆ, ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳು ಯಶಸ್ವಿಯಾಗಿ ಮುನ್ನಡೆಯುತ್ತಿವೆ. ರಾಷ್ಟ್ರೀಯ ಆರೋಗ್ಯ ಮಿಷನ್‌ನಿಂದ ಪ್ರಸಕ್ತ ಸಾಲಿಗೆ 887 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಅವರು ಇದೆ ಸಂದರ್ಭದಲ್ಲಿ ವಿವರಿಸಿದರು.

No comments: