ಮಂಗಳೂರು,ಮೇ 23: ಬಜ್ಪೆ ವಿಮಾನ ದುರಂತದಲ್ಲಿ ಮಡಿದವರಿಗೆ ಕೇಂದ್ರ ಸರಕಾರ 10 ಲಕ್ಷ ರೂಪಾಯಿ ಪರಿಹಾರ ನೀಡಲಿದೆ ಎಂದು ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ತಿಳಿಸಿದ್ದಾರೆ.
ಶನಿವಾರ ಕೇಂದ್ರ ಸರಕಾರ 2 ಲಕ್ಷ ರೂ.ಪರಿಹಾರ ಘೋಷಣೆ ಮಾಡಿತ್ತು. ಅದನ್ನು ಹೆಚ್ಚಿಸುವಂತೆ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಯಲ್ಲಿ ವಿನಂತಿಸಿದ ಮೇರೆಗೆ ಪರಿಹಾರ ಧನವನ್ನು 10 ಲಕ್ಷಕ್ಕೇರಿಸಲಾಗಿದೆ. ಅದನ್ನು ಪ್ರಧಾನಿ ಇಂದು ಸಂಜೆ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಆಸ್ಕರ್ ಫೆರ್ನಾಂಡಿಸ್ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಹೇಳಿದ್ದಾರೆ.
Subscribe to:
Post Comments (Atom)
No comments:
Post a Comment