ಶಿವಮೊಗ್ಗ ಮೇ 18: ಮುಂಬರುವ ಜೂನ್ ತಿಂಗಳ 19ರಂದು ಬೆಂಗಳೂರು ನಗರದಲ್ಲಿ ಪಕ್ಷಾತೀತವಾಗಿ ಚುನಾಯಿತರಾದ ಗ್ರಾಮ ಪಂಚಾಯತ್ ಸದಸ್ಯರ ಬಹತ್ ತರಬೇತಿ ಸಮಾವೇಶವನ್ನು ಸರಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗ್ರಾ.ಪಂ. ಸದಸ್ಯರಿಗೆ ತಮ್ಮ ಜವಾಬ್ದಾರಿಯ ಅರಿವು ಮಾಡಿಕೊಡಲು, ಗ್ರಾಮಗಳ ಸರ್ವತೋಮುಖ ಅಭಿವದ್ಧಿಗೆ ಕೈಗೊಳ್ಳಬೇಕಾದ ಕಾರ್ಯಗಳು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಮಾವೇಶದಲ್ಲಿ ಮಾಹಿತಿ ನೀಡಲಾಗುವುದು ಎಂದರು.
ಸಿರಿಗೆರೆ ಶ್ರೀಗಳು, ಧರ್ಮಸ್ಥಳದ ವೀರೇಂದ್ರ ಹೆಗ್ಡೆ ಮೊದಲಾದ ಹಿರಿಯರು ಗ್ರಾ.ಪಂ. ಸದಸ್ಯರಿಗೆ ಮಾರ್ಗದರ್ಶನ ಮಾಡಲಿದ್ದಾರೆ. ಈ ಸಮಾವೇಶ ಸದಸ್ಯರಿಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಶೇ.60ರಷ್ಟು ಪಕ್ಷ ಬೆಂಬಲಿತ ಅ್ಯರ್ಥಿಗಳು ವಿಜಯ ಸಾಧಿಸಿರುವ ವರದಿಗಳು ಬಂದಿವೆ ಎಂದು ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Subscribe to:
Post Comments (Atom)
No comments:
Post a Comment