VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 11, 2010

ಉಳ್ಳಾಲ: ಟಿಪ್ಪು ಸುಲ್ತಾನ್ ಕಾಲೇಜಿನಲ್ಲಿ ದಾಖಲಾತಿ ಆರಂಭ

ಮಂಗಳೂರು, ಮೇ ೧೦: ಉಳ್ಳಾಲದ ಮದನಿ ಚಾರಿಟೆಬಲ್ ಟ್ರಸ್ಟ್‌ನ ಆಶ್ರಯದಲ್ಲಿ ನಡೆಯು ತ್ತಿರುವ ಟಿಪ್ಪು ಸುಲ್ತಾನ್ ಪದವಿ ಕಾಲೇಜು ಉಳ್ಳಾಲ ಪರಿಸರದ ಯುವ ಪೀಳಿಗೆಗೆ ಯಶಸ್ವಿ ಭವಿಷ್ಯವನ್ನು ರೂಪಿಸುವಂತಹ ಶಿಕ್ಷಣ ನೀಡುವ ಮೂಲಕ ಪ್ರಗತಿ ಪಥದಲ್ಲಿ ಸಾಗುತ್ತಿದ್ದು, ಈ ಶೈಕ್ಷಣಿಕ ವರ್ಷದ ದಾಖಲಾತಿ ಆರಂಭ ಗೊಂಡಿದೆ. ಉಳ್ಳಾಲದ ರೈಲ್ವೆ ನಿಲ್ದಾಣದಿಂದ ಅರ್ಧ ಕಿ.ಮೀ. ಹಾಗೂ ತೊಕ್ಕೊಟ್ಟಿನಿಂದ ೨ ಕಿ.ಮೀ. ದೂರದಲ್ಲಿ ಈ ಸಂಸ್ಥೆಯಿದ್ದು, ಇಲ್ಲಿನ ಟಿಪ್ಪು ಸುಲ್ತಾನ್ ಪದವಿ ಪೂರ್ವ ಕಾಲೇಜು ಮತ್ತು ಟಿಪ್ಪು ಸುಲ್ತಾನ್ ಪದವಿ ಕಾಲೇಜುಗಳೆರಡೂ ಸರ್ವ ರೀತಿಯ ಸೌಲಭ್ಯಗಳಿಂದ ಸುಸಜ್ಜಿತ ವಾಗಿದೆ. ಉತ್ತಮ ಉಪನ್ಯಾಸಕ ವೃಂದ, ಶಿಕ್ಷಕೇತರ ಸಿಬ್ಬಂದಿ, ಸುಸಜ್ಜಿತ ಗ್ರಂಥಾಲಯ, ಶಾರೀರಿಕ ಶಿಕ್ಷಣ, ವಾಹನ ವ್ಯವಸ್ಥೆ, ಆಧುನಿಕ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್‌ಗಳ ವ್ಯವಸ್ಥೆಯನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿದೆ. ಟಿಪ್ಪು ಸುಲ್ತಾನ್ ಪದವಿ ಪೂರ್ವ ಕಾಲೇಜಿ ನಲ್ಲಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿದ್ದು, ಕಲಾ ವಿಭಾಗದಲ್ಲಿ ಇತಿಹಾಸ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ವಿಜ್ಞಾನದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಜೀವಶಾಸ್ತ್ರ ಹಾಗೂ ಕಂಪ್ಯೂಟರ್ ಸಾಯನ್ಸ್, ವಾಣಿಜ್ಯ ವಿಭಾಗದಲ್ಲಿ ಇತಿಹಾಸ, ಅರ್ಥಶಾಸ್ತ್ರ, ವ್ಯವಹಾರಿಕ ಅಧ್ಯಯನ ವಿಷಯ ದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಈ ಶೈಕ್ಷಣಿಕ ವರ್ಷದಲ್ಲಿ ಎಸೆಸೆಲ್ಸಿಯಲ್ಲಿ ಶೇ.೭೦ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಭಾಗಕ್ಕೆ ಉಚಿತ ಪ್ರವೇಶವನ್ನು ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಅದರ ಸದುಪಯೋಗವನ್ನು ಪಡೆಯಬಹುದು. ಟಿಪ್ಪು ಸುಲ್ತಾನ್ ಪದವಿ ಕಾಲೇಜು ಮಂಗಳೂರು ವಿವಿ ಸಂಯೋಜನೆಗೆ ಒಳಪಟ್ಟಿದ್ದು, ಇಲ್ಲಿ ಬಿ‌ಎ (ಎಚ್‌ಇಪಿ, ಎಚ್‌ಇ‌ಎಸ್), ಬಿಕಾಂ, ಬಿಬಿ‌ಎಂ, ಬಿಸಿ‌ಎ ವಿಷಯದಲ್ಲಿ ಸೆಮಿಸ್ಟರ್ ಪದ್ಧತಿಯಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಪದವಿ ವಿಜ್ಞಾನದ ಜೊತೆಗೆ ಔದ್ಯೋಗಿಕ ಜ್ಞಾನವನ್ನು ಕೂಡಾ ಪರಿಣಾಮಕಾರಿಯಾಗಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದು, ಹುಡುಗಿ ಯರಿಗೆ ಪ್ರತ್ಯೇಕ ಬೋಧನಾ ವ್ಯವಸ್ಥೆ ಕಲ್ಪಿಸಲಾಗಿದೆ. ಪದವಿಯ ಪ್ರಥಮ ವರ್ಷದ ಎರಡು ಸೆಮಿಸ್ಟರ್‌ಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ದ್ವಿತೀಯ ಹಾಗೂ ತೃತೀಯ ಶೈಕ್ಷಣಿಕ ವರ್ಷಕ್ಕೆ ಉಚಿತ ಶಿಕ್ಷಣದ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

No comments: