VISHWA KANNADIGA NEWS - ವಿಶ್ವ ಕನ್ನಡಿಗ ನ್ಯೂಸ್

ವಿಶ್ವ ಕನ್ನಡಿಗ ನ್ಯೂಸ್ ಈಗ ಹೊಸ ತಾಣದಲ್ಲಿ

ಆತ್ಮೀಯ ಓದುಗರೇ ವಿಶ್ವ ಕನ್ನಡಿಗ ನ್ಯೂಸ್ ಓದಲು ಈ ಕೆಳಕಂಡ ಲಿಂಕ್ ಅನ್ನು ಕ್ಲಿಕ್ ಮಾಡಿರಿ...





http://www.vknewz.com

May 29, 2010

ವಿಧಾನಪರಿಷತ್‌ಗೆ ತಿಪ್ಪಣ್ಣ, ಲೆಹರ್‌ಸಿಂಗ್ ನಾಮ ನಿರ್ದೇಶನ ಶಿಫಾರಸಿಗೆ ಅಂಕಿತ

ಬೆಂಗಳೂರು, ಮೇ 28: ವಿಧಾನ ಪರಿಷತ್ ನಾಮನಿರ್ದೇಶನಕ್ಕೆ ಬಿಜೆಪಿ ಶಿಫಾರಸು ಮಾಡಿದ್ದ ತಿಪ್ಪಣ್ಣ ಹಾಗೂ ಲೆಹರ್‌ಸಿಂಗ್ ಹೆಸರಿಗೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅಂಕಿತ ಹಾಕಿದ್ದಾರೆ.

ರಾಜ್ಯಸಭೆ, ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಂತಿಮ ತೀರ್ಮಾಣ ಕೈಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ಚುನಾವಣಾ ಸಮನ್ವಯ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುಮಾರು 2ಗಂಟೆ ಕಾಲ ಸುದೀರ್ಘ ಚರ್ಚೆ ನಡೆಸಿದ ನಂತರ ವಿಧಾನಪರಿಷತ್‌ಗೆ ಇತ್ತೀಚೆಗೆ ಜೆಡಿಎಸ್‌ನಿಂದ ಬಿಜೆಪಿಗೆ ಸೇರ್ಪಡೆ ಗೊಂಡಿದ್ದ ತಿಪ್ಪಣ್ಣರನ್ನು ಹಾಗೂ ರಾಜ್ಯ ಬಿಜೆಪಿ ಖಜಾಂಚಿ ಲೆಹರ್‌ಸಿಂಗ್‌ರನ್ನು ವಿಧಾನಪರಿಷತ್‌ಗೆ ನಾಮ ನಿರ್ದೇಶನ ಮಾಡಲು ರಾಜ್ಯಪಾಲರಿಗೆ ಶಿಫಾರಸು ಮಾಡುವ ನಿರ್ಧಾರ ಕೈಗೊಳ್ಳಲಾಯಿತು. ಈ ಶಿಫಾರಸಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ವಿಧಾನಪರಿಷತ್‌ನ 4 ಸ್ಥಾನಗಳಿಗೆ 36 ಹೆಸರುಗಳು ಹಾಗೂ ರಾಜ್ಯಸಭೆಯ ಎರಡು ಸ್ಥಾನಗಳಿಗೆ 12 ಹೆಸರುಗಳನ್ನು ಪಕ್ಷದ ಹೈಕಮಾಂಡ್‌ಗೆ ಶಿಫಾರಸ್ಸು ಮಾಡಿ, ಅದನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಾಗಿದೆ.

ಈ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ಪಕ್ಷದ ರಾಷ್ಟ್ರೀಯ ಮುಖಂಡ ಅನಂತಕುಮಾರ್ ಸಭೆಯ ಬಳಿಕ ದಿಲ್ಲಿಗೆ ಕೊಂಡೊಯ್ದಿದ್ದಾರೆ ಎಂದು ಮೂಲಗಳು ಹೇಳಿವೆ.

ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಲ್ಲಿ ವಿಧಾನಪರಿಷತ್‌ಗೆ ಈಗಾಗಲೇ ರಾಜ್ಯಪಾಲರಿಗೆ ಶಿಫಾರಸು ಮಾಡಿರುವ ತಿಪ್ಪಣ್ಣ ಹಾಗೂ ಲೆಹರ್ ಸಿಂಗ್‌ರ ಹೆಸರುಗಳನ್ನು ಹೊರತುಪಡಿಸಿ, ವಿ.ಸೋಮಣ್ಣ, ನಾರಾಯಣ ಸಾ.ಬಾಂಡಗೆ, ವಿಜಯ ಶಂಕರ್, ಅಶ್ವತ್ಥನಾರಾಯಣ ಅವರ ಹೆಸರು, ರಾಜ್ಯಸಭೆಗೆ ವೆಂಕಯ್ಯ ನಾಯ್ಡು, ಆಯನೂರು ಮಂಜುನಾಥ್ ಹೆಸರುಗಳನ್ನು ಸೇರಿಸಲಾಗಿದೆ ಎಂದು ತಿಳಿದುಬಂದಿದೆ.

ಸಭೆಯಲ್ಲಿ ಆರೆಸ್ಸೆಸ್ ಮುಖಂಡ ಸಂತೋಷ್, ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಸಂಸದ ಅನಂತಕುಮಾರ್, ಡಿ.ವಿ.ಸದಾನಂದ ಗೌಡ, ಸಚಿವ ವಿ.ಎಸ್.ಆಚಾರ್ಯ, ಜಗದೀಶ್ ಶೆಟ್ಟರ್, ಯೋಜನಾ ಮಂಡಳಿ ಉಪಾಧ್ಯಕ್ಷ ಜಗದೀಶ್ ಶೆಟ್ಟರ್ ಮುಂತಾದವರು ಪಾಲ್ಗೊಂಡಿದ್ದರು.

No comments: